ಬುಧವಾರ, ಮೇ 12, 2021
17 °C

ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದ ಟ್ರ್ಯಾಕ್ಟರ್ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ 8 ಟ್ರಾಕ್ಟರ್‌ಗಳನ್ನು ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಮೇರೆಗೆ ಪರವಾನಗಿ ಇಲ್ಲದೆ ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿ ಮರಳು ಸಾಗಾಣಿಕೆ ಮಾಡುತ್ತಿದ್ದ  8 ಟ್ರಾಕ್ಟರ್‌ಗಳನ್ನು ಪೊಲೀಸರು ವಶಪಡಿಸಿಕೊಂಡು, ಮೊಕದ್ದಮೆ ದಾಖಲಿಸಿದ್ದಾರೆ.



ತಹಸೀಲ್ದಾರರ ಆದೇಶದ ಮೇರೆಗೆ, ಅಕ್ರಮ ಮರಳು ಸಾಗಾಣಿಕೆ, ಫಿಲ್ಟರ್ ಮರಳು ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಟ್ರಾಕ್ಟರ್‌ಗಳನ್ನು ವಶಪಡಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಶಿವಕುಮಾರ್ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.