ಗುರುವಾರ , ಮೇ 13, 2021
39 °C

ಅಕ್ರಮ ಮರಳು ಸಾಗಣೆ; 41 ಲಾರಿ ವಶ, 12 ಜನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಳವಳ್ಳಿ/ಮದ್ದೂರು: ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮರಳು ಮರಳು ಸಾಗಣೆ ಮಾಡುತ್ತಿದ್ದ 41 ಲಾರಿ ಹಾಗೂ ಎರಡು ಟ್ರ್ಯಾಕ್ಟರ್‌ಗಳನ್ನು ಶನಿವಾರ ವಶಪಡಿಸಿಕೊಳ್ಳಲಾಗಿದ್ದು, 12 ಮಂದಿಯನ್ನು ಬಂಧಿಸಲಾಗಿದೆ.ಮಳವಳ್ಳಿ ತಾಲ್ಲೂಕಿನಲ್ಲಿ ಕಾವೇರಿ ನದಿ ವ್ಯಾಪ್ತಿಯಿಂದ ಬೆಂಗಳೂರಿಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 24 ಲಾರಿ ಹಾಗೂ ಎರಡು ಟ್ರ್ಯಾಕ್ಟರ್ ವಶಪಡಿಸಿಕೊಳ್ಳಲಾಗಿದೆ. ತಾಲ್ಲೂಕಿನ ಪೂರಿಗಾಲಿ, ಬೆಳಕವಾಡಿ, ರಾವಣಿ, ಸರಗೂರು ಹಾಗೂ ಕನಕಪುರ ರಸ್ತೆ ಮೂಲಕ ಅಕ್ರಮ ಮರಳು ಲಾರಿಗಳು ಸಂಚರಿಸುತ್ತಿದ್ದವು.ಮದ್ದೂರು ತಾಲ್ಲೂಕಿನ ಬಿ.ಹೊಸೂರು ಪಟ್ಟಣದ ಟಿ.ಬಿ. ವೃತ್ತದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಈ ಸಂಬಂಧ 12 ಮಂದಿಯನ್ನು ಬಂಧಿಸಲಾಗಿದೆ.ಲಾರಿ ಚಾಲಕರು ಹಾಗೂ ಮಾಲೀಕರಿಗೆ ಪೊಲೀಸರ ಬಗ್ಗೆ ಮಾಹಿತಿ ನೀಡುತ್ತಿದ್ದ ಆರೋಪದ ಮೇಲೆ 12 ಜನರನ್ನು ಬಂಧಿಸಲಾಗಿದೆ. ಅಲ್ಲದೆ, ಬಂಧಿತರು ಬಳಸುತ್ತಿದ್ದ ಎರಡು ಕಾರು, 4 ಬೈಕ್‌ಗಳನ್ನೂ ವಶಪಡಿಸಿಕೊಳ್ಳಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.