ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಕಾಡಾನೆ ಸಾವು

7

ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಕಾಡಾನೆ ಸಾವು

Published:
Updated:
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಕಾಡಾನೆ ಸಾವು

ಗುಂಡ್ಲುಪೇಟೆ:  ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಲೊಕ್ಕೆರೆ ಅರಣ್ಯ ಪ್ರದೇಶಕ್ಕೆ ಸೇರಿದ ಯಲಚಟ್ಟಿ ಗ್ರಾಮದ ರೈತ ಲಿಂಗಪ್ಪ ಎಂಬುವವರ ಜಮೀನಿನಲ್ಲಿ ಅಕ್ರಮವಾಗಿ ಹರಿಸಿದ್ದ ವಿದ್ಯುತ್ ಬೇಲಿಗೆ ಸಿಲುಕಿ 13 ವರ್ಷದ ಹೆಣ್ಣು ಕಾಡಾನೆ ಬುಧವಾರ ರಾತ್ರಿ ಮೃತಪಟ್ಟಿದೆ.ಜಮೀನಿನಲ್ಲಿ ಬೆಳೆದಿದ್ದ ಚೆಂಡು ಮಲ್ಲಿಗೆ ಬೆಳೆ ಸಂರಕ್ಷಿಸಲು ತಮ್ಮ ಜಮೀನಿನ ಬೇಲಿಗೆ ಅಕ್ರಮವಾಗಿ ವಿದ್ಯುತ್ ಹರಿಸಿದ್ದರು.  ಮೇವು ಅರಸಿ ಬಂದ ಕಾಡಾನೆ ವಿದ್ಯುತ್‌ನ ಶಾಕ್‌ನಿಂದ ಮೃತಪಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.ಕಾಡಾನೆಯ ಮರಣೋತ್ತರ ಪರೀಕ್ಷೆಯನ್ನು ಮೈಸೂರಿನ ಪಶು ವೈದ್ಯಾಧಿಕಾರಿ ನಾಗರಾಜು ನಡೆಸಿದರು. ಘಟನೆ ನಡೆದ ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಹನುಮಂತಪ್ಪ,  ಗುಂಡ್ಲುಪೇಟೆ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜಮೂರ್ತಿ, ವಲಯ ಅರಣ್ಯಾಧಿಕಾರಿ ಮಹೇಶ್ ಭೇಟಿ ನೀಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry