ಅಕ್ರಮ: ವಿಮ್ಸ ವೈದ್ಯನ ಅಮಾನತು

7

ಅಕ್ರಮ: ವಿಮ್ಸ ವೈದ್ಯನ ಅಮಾನತು

Published:
Updated:

ಬಳ್ಳಾರಿ: ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ನ ಪ್ರವೇಶ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ, ವಿಮ್ಸನ ವಿಧಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಿನಾಯಕ ಪ್ರಸನ್ನ ಅವರನ್ನು ಅನಧಿಕೃತ ಗೈರು ಹಾಜರಿ ಕಾರಣ ಗುರುವಾರ ಅಮಾನತು ಮಾಡಲಾಗಿದೆ.ಇದೇ ವರ್ಷದ ಜನವರಿ 31ರಂದು ವಿಮ್ಸನಲ್ಲಿ ನಡೆದಿದ್ದ ಸ್ನಾತಕೋತ್ತರ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಡಾ. ವಿನಾಯಕ ಪ್ರಸನ್ನ ಅವರ ಬಂಧನಕ್ಕೆ ವಾರೆಂಟ್ ಜಾರಿ ಮಾಡಿದೆ.ತಲೆ ಮರೆಸಿಕೊಂಡಿರುವ ಡಾ. ವಿನಾಯಕ ಸೆ. 22ರಿಂದ ಕೆಲಸಕ್ಕೆ ಗೈರು ಹಾಜರಾಗಿದ್ದು, ಇದೀಗ ಅವರನ್ನು ಅಮಾನತು ಮಾಡಲಾಗಿದೆ ಎಂದು ವಿಮ್ಸ ನಿರ್ದೇಶಕ ಡಾ.ಬಿ. ದೇವಾನಂದ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry