ಗುರುವಾರ , ಏಪ್ರಿಲ್ 22, 2021
28 °C

ಅಕ್ಷರ ಜಾತ್ರೆಗೆ ಭರದ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಹಾಸನ: ಮಾ.19ಹಾಗೂ 20ರಂದು ನಡೆಯಲಿರುವ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಸಾಹಿತ್ಯ ಪರಿಷತ್ ಭವನ ಮಾತ್ರವಲ್ಲದೆ ಪಕ್ಕದ ಕಲಾಭವನದಲ್ಲೂ ಸಮಾನಾಂತರ ವೇದಿಕೆ ನಿರ್ಮಿಸಿ ಗೋಷ್ಠಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ’ ಎಂದು ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಉದಯರವಿ ತಿಳಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು.19ರಂದು ಬೆಳಿಗ್ಗೆ ನಗರದಲ್ಲಿ ಮೆರವಣಿಗೆ ಮೂಲಕ ಸಮ್ಮೇಳನಾಧ್ಯಕ್ಷ ಎಚ್.ಬಿ. ರಮೇಶ್ ಅವರನ್ನು ವೇದಿಕೆಗೆ ಬರಮಾಡಿಕೊಳ್ಳಲಾಗುವುದು. 25ಕ್ಕೂ ಹೆಚ್ಚು ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಪರಿಷತ್ ಭವನದ ಹೊರಗೆ ಹಾಕಿರುವ ವೇದಿಕೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯುವುದು.ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಸಮ್ಮೇಳನಉದ್ಘಾಟಿ ಸುವರು. ಕಸಾಪ ಅಧ್ಯಕ್ಷ ನಲ್ಲೂರು ಪ್ರಸಾದ್ ಸ್ಮರಣಸಂಚಿಕೆ ಬಿಡುಗಡೆ ಮಾಡುವರು. ಪುಸ್ತಕ ಮಾರಾಟಕ್ಕೂ ಸೇರಿದಂತೆ 50ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಇವು ಗಳನ್ನು ಶಾಸಕ ಎಚ್.ಡಿ. ರೇವಣ್ಣ ಉದ್ಘಾಟಿಸುವರು. ಕಲಾಪ್ರದರ್ಶನವನ್ನು ಶಾಸಕ ಎಚ್.ಎಸ್. ಪ್ರಕಾಶ್ ಹಾಗೂ ಸ್ತ್ರೀಶಕ್ತಿ ಗುಂಪುಗಳು ಉತ್ಪಾದಿಸಿದ ಉತ್ಪನ್ನಗಳ ಮಾರಾಟವನ್ನು ಸರೋಜಿನಿ ಭಾರದ್ವಾಜ್ ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.ಇದಕ್ಕೂ ಮೊದಲು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿ ನವೀನ್‌ರಾಜ್ ಸಿಂಗ್ ರಾಷ್ಟ್ರಧ್ವಜಾರೋಹಣ ಮಾಡುವರು. ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಶರತ್ ಚಂದ್ರ ಕನ್ನಡ ಧ್ವಜ ಹಾಗೂ ಉದಯರವಿ ಅವರು ಪರಿಷತ್ತಿನ ಧ್ವಜಾರೋಹಣ ಮಾಡುವರು.9.30ಕ್ಕೆ ಮೆರವಣಿಗೆ ಆರಂಭವಾಗಲಿದ್ದು, ನಗರಸಭೆ ಅಧ್ಯಕ್ಷ ಸಿ.ಆರ್. ಶಂಕರ್  ಇದಕ್ಕೆ ಚಾಲನೆ ನೀಡುವರು. ಉಪಾಧ್ಯಕ್ಷೆ ಶ್ರೀವಿದ್ಯಾ, ಆಯುಕ್ತ ಶಿವನಂಜೇಗೌಡ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಮ್ಮೇಳನಕ್ಕೆ ಪರಿಷತ್ತಿನ ಕೇಂದ್ರ ಕಚೇರಿಯಿಂದ 2.75  ಲಕ್ಷ ರೂಪಾಯಿ ಬರಲಿದ್ದು, ಉಳಿದ ಹಣವನ್ನು ಸ್ಥಳೀಯ ದಾನಿಗಳಿಂದಲೇ ಸಂಗ್ರಹಿಸಲಾಗುವುದು’ ಎಂದು ಉದಯರವಿ ತಿಳಿಸಿದರು.ವರ್ಷದೊಳಗೆ ಪುತ್ಥಳಿ: ಕನ್ನಡ ಸಾಹಿತ್ಯ ಪರಿಷತ್ ಭವನದ ಆವರಣದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿ ಸ್ಥಾಪಿಸುವ ಕಾರ್ಯ ವರ್ಷದೊಳಗೆ ಪೂರ್ಣಗೊಳ್ಳುವುದು.  ಕೃಷ್ಣಶಿಲೆಯಲ್ಲಿ ಪುತ್ಥಳಿ ನಿರ್ಮಿಸಲಾಗುತ್ತಿದೆ. ಇದಕ್ಕೆ ಒಟ್ಟಾರೆ 3.30ಲಕ್ಷ ರೂಪಾಯಿ ವೆಚ್ಚವಾಗಲಿದ್ದು, ಖಾಸಗಿ ಸಂಸ್ಥೆಯ ವರು ದೇಣಿಗೆಯ ರೂಪದಲ್ಲಿ ಈಹಣ ನೀಡುವು ದಾಗಿ ತಿಳಿಸಿದ್ದಾರೆ ಎಂದು ಉದಯರವಿ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.