ಅಕ್ಷರ ದಾಸೋಹ ನೌಕರರ ಪ್ರತಿಭಟನೆ

6

ಅಕ್ಷರ ದಾಸೋಹ ನೌಕರರ ಪ್ರತಿಭಟನೆ

Published:
Updated:ಕೊಪ್ಪಳ: ರಾಜ್ಯ ಅಕ್ಷರ ದಾಸೋಹ ನೌಕರರ ಸೇವೆ ಕಾಯಂಗೊಳಿಸುವುದು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಸಮಿತಿ ಸದಸ್ಯರು ನಗರದಲ್ಲಿ ಗುರುವಾರ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.ಬನ್ನಿಕಟ್ಟಿ ಪ್ರದೇಶದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ನಂತರ ಜಿಲ್ಲಾ ಪಂಚಾಯಿತಿಗೆ  ತೆರಳಿ ಮನವಿ ಪತ್ರ ಸಲ್ಲಿಸಿದರು.“ಅಕ್ಷರ ದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುವ ನೌಕರರ ಸೇವೆಯನ್ನು ಕಾಯಂಗೊಳಿಸಬೇಕು. ಅಗತ್ಯ ಸೇವಾ ಸೌಲಭ್ಯಗಳನ್ನು ನೀಡಬೇಕು, ತಿಂಗಳ ಮೊದಲ ವಾರದಲ್ಲಿ ವೇತನ ನೀಡಬೇಕು” ಎಂದು ಸಂಘಟನೆಯ ಮುಖಂಡರು ಆಗ್ರಹಿಸಿದರು.ಜಿಲ್ಲಾ ಸಮಿತಿ ಅಧ್ಯಕ್ಷೆ ಲಕ್ಷ್ಮಿ ಸೋನಾರೆ, ಕಾರ್ಯದರ್ಶಿ ದುರುಗಪ್ಪ ಕುಷ್ಟಗಿ, ಸುಂಕಪ್ಪ ಗದಗ, ಗುರುರಾಜ ದೇಸಾಯಿ, ಹುಲುಗಪ್ಪ, ಮಹಾದೇವಮ್ಮ, ಶಾರದಮ್ಮ, ಪದ್ಮಾವತಿ, ಚಂದ್ರಕಲಾ, ದುರ್ಗಾಬಾಯಿ, ಗಂಗಮ್ಮ, ಜ್ಯೋತಿ ಹಾಗೂ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry