ಸೋಮವಾರ, ಮೇ 10, 2021
26 °C

ಅಗತ್ಯ ಔಷಧಿ ಖರೀದಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಳಬಾಗಲು: ಅಗತ್ಯ ಔಷಧಿಗಳಿಗಾಗಿ ಗ್ರಾಮೀಣ ಪ್ರದೇಶದ ಜನರು ಪಟ್ಟಣಕ್ಕೆ ಹೋಗುವುದು ತಪ್ಪಬೇಕು. ಅದಕ್ಕೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಅಗತ್ಯವಾದ ಔಷಧಿಗಳ ದಾಸ್ತಾನು ಇಟ್ಟುಕೊಳ್ಳುವಂತೆ ರಾಜ್ಯ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಎಸ್.ರಾಮಪ್ರಸಾದ್ ಸೂಚಿಸಿದರು. ತಾಲ್ಲೂಕಿನ ಕುರುಡುಮಲೆ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು ಅಸ್ಪತ್ರೆಯ ಸುತ್ತಮುತ್ತ ಸ್ವಚ್ಛ ವಾತಾವರಣ ನಿರ್ಮಾಣಕ್ಕೆ ಶ್ರಮಿಸಲು ಸಲಹೆ ನೀಡಿದರು.

ಗ್ರಾಮೀಣ ಆಸ್ಪತ್ರೆಗಳಿಗೆ ಅಗತ್ಯವಿರುವ ಸಲಕರಣೆ ಹಾಗೂ ಔಷಧಿಗಳ ಬಗ್ಗೆ ಮನವಿ ಸಲ್ಲಿಸಿದರೆ ತಕ್ಷಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ತಹಶೀಲ್ದಾರ್ ಪಿ.ಜಯಮಾಧವ, ವೈದ್ಯಾಧಿಕಾರಿ ಡಾ.ಮಂಜುನಾಥ್ ಹಾಜರಿದ್ದರು.ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಲು ಸಲಹೆತಾಲ್ಲೂಕಿನ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಲು ಶಾಸಕ ಅಮರೇಶ್ ಅವರು ಶಿಕ್ಷಕರಿಗೆ ಸೂಚಿಸಿದರು. ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಆವ ರಣದಲ್ಲಿ ಸೋಮವಾರ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಕನ್ನಡ, ಉರ್ದು ಶಾಲೆಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.ಮಕ್ಕಳ ಜ್ಞಾನಾಭಿವೃದ್ಧಿಗೆ ಪೂರಕ ವಾದ ಗ್ರಂಥಾಲಯಗಳನ್ನು ಶಾಲೆಗಳಲ್ಲಿ ತೆರೆಯುವ ಸಲುವಾಗಿ ಅವಶ್ಯವಿರುವ ಕೊಠಡಿಗಳ ವಿವರ ಪಡೆದರು. ಶಿಕ್ಷಕರು ರಾಜಕೀಯದಿಂದ ದೂರ ವಿದ್ದು, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಗಮನ ನೀಡಬೇಕು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ವಿಕ್ಟರ್ ಭಾಗವಹಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.