ಮಂಗಳವಾರ, ಏಪ್ರಿಲ್ 13, 2021
31 °C

ಅಗ್ನಿಶಾಮಕ ಠಾಣೆ: 21ರಂದು ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೋಮವಾರಪೇಟೆ: ಬಹು ದಿನಗಳ ಬೇಡಿಕೆಯಾಗಿದ್ದ ಅಗ್ನಿಶಾಮಕ ಠಾಣೆ ರಾಜ್ಯ ಅಗ್ನಿ ಶಾಮಕ ಮತ್ತು ಸೇವೆ ಇಲಾಖೆಯ ವತಿಯಿಂದ ಇಲ್ಲಿನ ಮಹದೇಶ್ವರ ಬಡಾವಣೆಯಲ್ಲಿ ಮಾ. 21ರಂದು ಉದ್ಘಾಟನೆಗೊಳ್ಳಲಿದೆ.ನಗರದಲ್ಲಿ ಅಗ್ನಿಶಾಮಕ ಠಾಣೆ ಆರಂಭಿಸಲು ಸುಸಜ್ಜಿತ ಜಾಗವನ್ನು ಹುಡುಕಲಾಗುತ್ತಿತ್ತು. ಆದರೆ ಇದುವರೆಗೂ ಸೂಕ್ತ ಸ್ಥಳ ದೊರೆಯದ ಕಾರಣ ಮಹದೇಶ್ವರ ಬಡಾವಣೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಡಿ.ಮಂಜುನಾಥ್ ಅವರ ಕಟ್ಟಡದಲ್ಲಿ ಠಾಣೆ ತಾತ್ಕಾಲಿಕವಾಗಿ ನೆಲೆಗೊಳ್ಳಲಿದೆ.ಸದ್ಯ ಏಳೆಂಟು ಮಂದಿ ಸಿಬ್ಬಂದಿ ಇಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಅಗ್ನಿಶಾಮಕ ವಾಹನ ನಿಲ್ಲಿಸಲು ಷೆಡ್ ನಿರ್ಮಿಸುವ ಕಾರ್ಯ ಅರ್ಧ ಭಾಗ ಮಾತ್ರ ಈವರೆಗೆ ಮುಗಿದಿದೆ. ಮುಂದಿನ ದಿನಗಳಲ್ಲಿ ನಗರ ವ್ಯಾಪ್ತಿಯಲ್ಲಿ ಸುಸಜ್ಜಿತ ಅಗ್ನಿಶಾಮಕ ಠಾಣೆ ಆರಂಭವಾಗುವ ನಿರೀಕ್ಷೆಯಿದೆ.ಬೆಳಿಗ್ಗೆ 11.30 ಗಂಟೆಗೆ ಗೃಹ ಮತ್ತು ಸಾರಿಗೆ ಸಚಿವ ಆರ್.ಅಶೋಕ್ ಠಾಣೆಯನ್ನು ಉದ್ಘಾಟಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ವಹಿಸುತ್ತಾರೆ. ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ಅರಣ್ಯ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಚ್.ವಿಜಯಶಂಕರ್, ಸಂಸದ  ಎಚ್.ವಿಶ್ವನಾಥ್, ವಿಧಾನ ಪರಿಷತ್ ಸದಸ್ಯರಾದ ಎಂ.ಸಿ.ನಾಣಯ್ಯ ಹಾಗೂ ಟಿ.ಜಾನ್, ಕರ್ನಾಟಕ ಅಗ್ನಿಶಾಮಕ ದಳದ ಪೊಲೀಸ್ ಮಹಾನಿರ್ದೇಶಕ ಡಾ.ಡಿ.ವಿ.ಗುರುಪ್ರಸಾದ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರವಿ ಕುಶಾಲಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲೋಕೇಶ್ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷ ಎನ್.ಎಸ್.ಮೂರ್ತಿ ಮತ್ತಿತರರು ಪಾಲ್ಗೊಳ್ಳುವರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.