ಭಾನುವಾರ, ಜೂನ್ 13, 2021
21 °C

ಅಗ್ನಿ ಅನಾಹುತ: ಪೀಠೋಪಕರಣ ಭಸ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಚ್‌ಎಸ್‌ಆರ್ ಲೇಔಟ್ ಸಮೀಪದ ಸೋಮಸುಂದರ ಪಾಳ್ಯದಲ್ಲಿರುವ ಇಂಡಸ್ ಟ್ರಿ ಕ್ರಾಫ್ಟ್ಸ್ ಪ್ರೈವೇಟ್ ಲಿಮಿಟೆಡ್ ಪೀಠೋಪಕರಣಗಳ ಉತ್ಪಾದನಾ ಘಟಕದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಲಕ್ಷಾಂತರ ಮೌಲ್ಯದ ಪೀಠೋಪಕರಣಗಳು ಸುಟ್ಟು ಹೋಗಿವೆ.ಮೂರು ಅಂತಸ್ತಿನ ಕಟ್ಟಡದಲ್ಲಿರುವ ಘಟಕದ ನೆಲ ಮಹಡಿಯಲ್ಲಿ ಪೀಠೋಪಕರಣಗಳನ್ನು ದಾಸ್ತಾನು ಮಾಡಲಾಗಿತ್ತು. ಕಚ್ಚಾ ವಸ್ತುಗಳನ್ನು ಒಂದನೇ ಅಂತಸ್ತಿನಲ್ಲಿ ಸಂಗ್ರಹಿಸಲಾಗಿತ್ತು. ನೆಲ ಮಹಡಿಯಲ್ಲಿ ಮಧ್ಯಾಹ್ನ 1ರ ಸುಮಾರಿಗೆ ಬೆಂಕಿ ಹೊತ್ತಿಕೊಂಡು ಹೊಗೆ ಬರಲಾರಂಭಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.ಈ ವೇಳೆ ಸ್ಥಳದಲ್ಲಿದ್ದ ಕೆಲಸಗಾರರು ಕಟ್ಟಡದಿಂದ ಹೊರ ಬಂದು ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಮಾಡಿ ವಿಷಯ ತಿಳಿಸಿದರು. 11 ವಾಹನಗಳಲ್ಲಿ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ಇತರ ಅಂತಸ್ತುಗಳಿಗೆ ವ್ಯಾಪಿಸದಂತೆ ಕಾರ್ಯಾಚರಣೆ ನಡೆಸಿ ಹೆಚ್ಚಿನ ಅನಾಹುತ ತಪ್ಪಿಸಿದರು ಎಂದು ಪೊಲೀಸರು ಹೇಳಿದ್ದಾರೆ.ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಆದರೆ, ಹತ್ತು ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಪೀಠೋಪಕರಣಗಳು ಸುಟ್ಟು ಹೋಗಿವೆ ಎಂದು ಎಚ್‌ಎಸ್‌ಆರ್ ಲೇಔಟ್ ಠಾಣೆಯ ಎಸ್‌ಐ ಲಕ್ಷ್ಮಣಗೌಡ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.ಬೆಟ್ಟಿಂಗ್- ಬಂಧನ

ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ ಮೇಲೆ ಕಸ್ತೂರಬಾನಗರದ ಚಂದ್ರಶೇಖರ್ (52) ಮತ್ತು ಗವಿಪುರದ ಜಗದೀಶ್ (37) ಎಂಬುವರನ್ನು ಬಂಧಿಸಿರುವ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಐದು ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.ಏಷ್ಯಾಕಪ್ ಟೂರ್ನಿಯ ಶ್ರೀಲಂಕಾ ಹಾಗೂ ಬಾಂಗ್ಲಾ  ನಡುವಿನ ಪಂದ್ಯದ ಮೇಲೆ ಆರೋಪಿಗಳು ನಾಗರಬಾವಿ 2ನೇ ಹಂತದ ಮನೆಯೊಂದರಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದರು.ಈ ಬಗ್ಗೆ ಮಾಹಿತಿ ಕಲೆ ಹಾಕಿ ಅವರನ್ನು ಬಂಧಿಸಿ ಹಣ, ಲ್ಯಾಪ್‌ಟಾಪ್, ಟಿ.ವಿ ವಶಪಡಿಸಿಕೊಳ್ಳಲಾಗಿದೆ. ಜ್ಞಾನಭಾರತಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.