ಶುಕ್ರವಾರ, ಏಪ್ರಿಲ್ 16, 2021
31 °C

ಅಗ್ನಿ ಅನಾಹುತ ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹನುಮಂತನಗರದ ಅರ್ಕಾವತಿ ರಸ್ತೆಯಲ್ಲಿರುವ ಆಟಿಕೆಗಳ ತಯಾರಿಕಾ ಘಟಕದಲ್ಲಿ ಸ್ಟೌ ಸ್ಫೋಟದಿಂದ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮಹಿಳಾ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.ಬೃಂದಾವನನಗರದ ಧನಲಕ್ಷ್ಮಿ (38) ಸಾವನ್ನಪ್ಪಿದ ಕಾರ್ಮಿಕ ಮಹಿಳೆ. ಆಟಿಕೆಗಳ ತಯಾರಿಕಾ ಘಟಕದಲ್ಲಿ ಮಧ್ಯಾಹ್ನ 3.30ರ ಸುಮಾರಿಗೆ ಸ್ಟೌನಲ್ಲಿ ಸೀಮೆಎಣ್ಣೆ ಸೋರಿಕೆಯಾಗಿದ್ದರಿಂದ ಸ್ಟೌ ಸ್ಫೋಟಗೊಂಡಿದೆ. ಧನಲಕ್ಷಿ ಅವರು ಬೆಂಕಿಗೆ ಸಿಲುಕಿ ತೀವ್ರ ಗಾಯಗೊಂಡರು. ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. `ಕಟ್ಟಡದಲ್ಲಿ ಪೇಪರ್ ಬಂಡಲ್‌ಗಳಿದ್ದ ಕಾರಣ ಬೆಂಕಿಯ ತೀವ್ರತೆ ಹೆಚ್ಚಿತ್ತು. ಕಟ್ಟಡದ ಮಾಲೀಕ ನಾಗಪ್ಪ ಅವರ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ~ ಎಂದು ಹನುಮಂತನಗರ ಪೊಲೀಸರು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.