ಅಗ್ನಿ ದುರಂತ: ಅಂದಾಜು 4 ಲಕ್ಷ ಹಾನಿ
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ವಿಪ್ರೊ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ದೊಡ್ಡ ಪ್ಯಾನೆಲ್ ಬೋರ್ಡ್ ಬೆಂಕಿಗೆ ಆಹುತಿಯಾಗಿದೆ.
ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡಿದ್ದು, ಮೂರು ವಾಹನಗಳಲ್ಲಿ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಪ್ಪತ್ತು ಅಡಿಯ ದೊಡ್ಡ ಪ್ಯಾನೆಲ್ ಬೋರ್ಡ್ ಬೆಂಕಿಯಿಂದ ಸಂಪೂರ್ಣ ಉರಿದುಹೋಗಿದ್ದು, ನಾಲ್ಕು ಲಕ್ಷ ರೂಪಾಯಿಗಳ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.