ಅಗ್ರಸ್ಥಾನದಲ್ಲಿ ಮಿಥಾಲಿ ರಾಜ್

7

ಅಗ್ರಸ್ಥಾನದಲ್ಲಿ ಮಿಥಾಲಿ ರಾಜ್

Published:
Updated:

 


ದುಬೈ (ಪಿಟಿಐ): ಭಾರತ ಕ್ರಿಕೆಟ್ ತಂಡದ ಆಟಗಾರ್ತಿ ಮಿಥಾಲಿ ರಾಜ್ ಐಸಿಸಿ ಏಕದಿನ ರ‌್ಯಾಂಕಿಂಗ್ ಪಟ್ಟಿಯ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರಸ್ಥಾನ ಗಳಿಸಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಜೂಲನ್ ಗೋಸ್ವಾಮಿ ಮೂರನೇ ಸ್ಥಾನ ಗಳಿಸಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.

 

ಮಿಥಾಲಿ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಹತ್ತರೊಳಗೆ ಸ್ಥಾನ ಪಡೆದ ಏಕೈಕ ಭಾರತೀಯ ಆಟಗಾರ್ತಿಯಾಗಿದ್ದಾರೆ. ಹರ್‌ಪ್ರೀತ್ ಕೌರ್ 11ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಆಲ್‌ರೌಂಡರ್ ವಿಭಾಗದಲ್ಲಿ ಅಮಿತಾ ಶರ್ಮಾ ಏಳನೇ ಸ್ಥಾನ ಹೊಂದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry