ಶುಕ್ರವಾರ, ನವೆಂಬರ್ 22, 2019
26 °C

ಅಗ್ರ ಹತ್ತರಲ್ಲಿ ಪೂಜಾರ, ಅಶ್ವಿನ್

Published:
Updated:

ದುಬೈ (ಪಿಟಿಐ): ಭಾರತದ ಚೇತೇಶ್ವರ ಪೂಜಾರ ಮತ್ತು ರವಿಚಂದ್ರನ್ ಅಶ್ವಿನ್ ಐಸಿಸಿ ಟೆಸ್ಟ್ ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಈ ಹಿಂದಿ ಸ್ಥಾನವನ್ನು ಕಾಪಾಡಿಕೊಂಡಿದ್ದಾರೆ.ಐಸಿಸಿ ಭಾನುವಾರ ಪ್ರಕಟಿಸಿದ ನೂತನ ಪಟ್ಟಿಯಲ್ಲಿ ಬಲಗೈ ಬ್ಯಾಟ್ಸ್‌ಮನ್ ಪೂಜಾರ 777 ಪಾಯಿಂಟ್‌ಗಳೊಂದಿಗೆ ಏಳನೇ  ಸ್ಥಾನದಲ್ಲಿ ಮುಂದುವರಿದಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಆರ್. ಅಶ್ವಿನ್ 757 ರ‍್ಯಾಂಕಿಂಗ್ ಪಾಯಿಂಟ್‌ಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ. ಅಗ್ರ ಹತ್ತರಲ್ಲಿ ಕಾಣಿಸಿಕೊಂಡ ಭಾರತದ ಆಟಗಾರರು ಇವರಿಬ್ಬರು ಮಾತ್ರ.ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಹಾಶಿಮ್ ಆಮ್ಲಾ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ವೆಸ್ಟ್ ಇಂಡೀಸ್‌ನ ಶಿವನಾರಾಯಣ್ ಚಂದ್ರಪಾಲ್ ಮತ್ತು ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ನಂತರದ ಸ್ಥಾನಗಳನ್ನು ಪಡೆದಿದ್ದಾರೆ.ಬೌಲರ್‌ಗಳ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳನ್ನು ದಕ್ಷಿಣ ಆಫ್ರಿಕಾ ಕ್ರಿಕೆಟಿಗರು ತಮ್ಮದಾಗಿಸಿಕೊಂಡಿದ್ದಾರೆ. ಡೇಲ್ ಸ್ಟೇನ್ 905 ರ‌್ಯಾಂಕಿಂಗ್ ಪಾಯಿಂಟ್‌ಗಳೊಂದಿಗೆ ಪ್ರಥಮ ಸ್ಥಾನದಲ್ಲಿದ್ದರೆ, ವೆರ್ನಾನ್ ಫಿಲಾಂಡರ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ರಂಗನಾ ಹೆರಾತ್ ತೃತೀಯ ಸ್ಥಾನ ಪಡೆದಿದ್ದಾರೆ.ಜಿಂಬಾಬ್ವೆ ತಂಡದ ನಾಯಕ ಬ್ರೆಂಡನ್ ಟೇಲರ್ ತಮ್ಮ ಜೀವನ ಶ್ರೇಷ್ಠ 29ನೇ ಸ್ಥಾನ ಗಳಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡೂ  ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ಅವರು 41 ಸ್ಥಾನಗಳ ಬಡ್ತಿ ಪಡೆದಿದ್ದಾರೆ.

ಪ್ರತಿಕ್ರಿಯಿಸಿ (+)