ಬುಧವಾರ, ನವೆಂಬರ್ 13, 2019
28 °C

ಅಜಯ್‌ಸಿಂಗ್‌ಗೆ ಗಾಯ

Published:
Updated:

ಜೇವರ್ಗಿ: ತಾಲ್ಲೂಕಿನ ನೆಲೋಗಿಯಿಂದ ಹಿಪ್ಪರಗಾ (ಎಸ್.ಎನ್) ಮಾರ್ಗವಾಗಿ ವಸ್ತಾರಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮಗುಚಿದ್ದರಿಂದ ಜೇವರ್ಗಿ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಅವರ ಪುತ್ರ ಡಾ.ಅಜಯ ಸಿಂಗ್ ಸೇರಿ ಮೂವರು ಗಾಯಗೊಂಡಿದ್ದಾರೆ.ಮಂಗಳವಾರ ರಾತ್ರಿ 11.45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಡಾ.ಅಜಯ ಸಿಂಗ್, ಕಾರಿನ ಚಾಲಕ ಮಲ್ಲಿಕಾರ್ಜುನ ಹಾಗೂ ಲಕ್ಷ್ಮಣ ಯಂಕಂಚಿ ನೆಲೋಗಿ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಗುಲ್ಬರ್ಗದ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿದ ನಂತರ ಬುಧವಾರ ಬೆಳಿಗ್ಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಆದರೆ ಈ ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)