ಶುಕ್ರವಾರ, ನವೆಂಬರ್ 15, 2019
22 °C

ಅಜಯ್ ಸೇಠ್: ವಾಣಿಜ್ಯ ತೆರಿಗೆ ಆಯುಕ್ತ

Published:
Updated:

ಬೆಂಗಳೂರು: ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ (ಬಜೆಟ್ ಮತ್ತು ಸಂಪನ್ಮೂಲ) ಹುದ್ದೆಯಲ್ಲಿದ್ದ ಐಎಎಸ್ ಅಧಿಕಾರಿ ಅಜಯ್ ಸೇಠ್ ಅವರನ್ನು ವಾಣಿಜ್ಯ ತೆರಿಗೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.ವಾಣಿಜ್ಯ ತೆರಿಗೆ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ ಅವರನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ಜಂಟಿ ಕಾರ್ಯದರ್ಶಿ ಶ್ರೇಣಿಯ ಈ ಹುದ್ದೆಗೆ ತ್ರಿಪಾಠಿ ಅವರನ್ನು ನೇಮಿಸಿ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ಏಪ್ರಿಲ್ 4ರಂದು ಆದೇಶ ಹೊರಡಿಸಿತ್ತು.

ಪ್ರತಿಕ್ರಿಯಿಸಿ (+)