ಗುರುವಾರ , ಜೂನ್ 24, 2021
23 °C

ಅಜರುದ್ದೀನ್‌ಗೆ 15 ಲಕ್ಷ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಅಗೌರವ ತೋರಿದ ಕಾರಣ ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ಸಂಸದ ಮೊಹಮದ್ ಅಜರುದ್ದೀನ್ ಅವರಿಗೆ ದೆಹಲಿ ನ್ಯಾಯಾಲಯ 15 ಲಕ್ಷ ರೂಪಾಯಿ ದಂಡ ವಿಧಿಸಿದೆ.ಅಜರುದ್ದೀನ್ ನ್ಯಾಯಾಲಯಕ್ಕೆ ಗೈರು ಹಾಜರಾಗಿದ್ದು ಮಾತ್ರವಲ್ಲದೆ ಕೋರ್ಟ್ ಸಮಯವನ್ನು ವ್ಯರ್ಥ ಗೊಳಿಸಿದ್ದಕ್ಕಾಗಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ವಿಕ್ರಾಂತ್ ವೇದ್ ಈ ಕ್ರಮ ಕೈಗೊಂಡಿದ್ದಾರೆ.ಕೋರ್ಟ್‌ನ ಹೊರಗೆ ಪ್ರಕರಣ ಇತ್ಯರ್ಥಗೊಳಿಸಿದ್ದರ ಮಾಹಿತಿಯನ್ನು  ತಡವಾಗಿ ನ್ಯಾಯಾಲಯದ ಗಮನಕ್ಕೆ ತಂದಿದ್ದರು.ಇದಕ್ಕೂ ಮುನ್ನ ನ್ಯಾಯಾಲಯ ಅಜರುದ್ದೀನ್  ವಿರುದ್ಧ ಜಾಮೀನುರಹಿತ ಬಂಧನದ ವಾರೆಂಟ್ ಹೊರಡಿಸಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.