ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಚಾಲನೆ

7

ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಚಾಲನೆ

Published:
Updated:

ಮಡಿಕೇರಿ: ಸರ್ಕಾರ ನಾಗರಿಕರಿಗೆ ಕಾಲಮಿತಿಯೊಳಗೆ ಅಗತ್ಯ ಪ್ರಮಾಣ ಪತ್ರಗಳನ್ನು ನೀಡಲು ವಿನೂತನವಾಗಿ ಜಾರಿಗೆ ತಂದಿರುವ ಅಟಲ್ ಜೀ ಜನಸ್ನೇಹಿ ಕೇಂದ್ರವನ್ನು ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರು ನಗರದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಉದ್ಘಾಟಿಸಿದರು.ಈ ಕೇಂದ್ರದಲ್ಲಿ ಜಾತಿ, ಆದಾಯ ಮತ್ತಿತರ 36 ಪ್ರಮಾಣ ಪತ್ರಗಳನ್ನು ಸಾರ್ವಜನಿಕರು ಸಕಾಲದಲ್ಲಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು. ಅರ್ಜಿದಾರರರು ಬಯಸಿದ ಪ್ರಮಾಣ ಪತ್ರಗಳು ಸಿದ್ಧಗೊಂಡ ಅವರಿಗೆ ಮೊಬೈಲ್ ಮೂಲಕ ಸಂದೇಶ ಕೂಡ ರವಾನಿಸಲಾಗುತ್ತದೆ ಎಂದರು. ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್ ಮಾತನಾಡಿ, ಅಟಲ್ ಜೀ ಜನಸ್ನೇಹಿ ಕೇಂದ್ರಗಳನ್ನು ಜಿಲ್ಲೆಯ 3 ತಾಲ್ಲೂಕು ಕೇಂದ್ರ ಮತ್ತು 13 ಹೋಬಳಿ ಕೇಂದ್ರಗಳಲ್ಲಿ ಆರಂಭಿಸಲಾಗಿದೆ ಎಂದು ಅವರು ತಿಳಿಸಿದರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ. ಶಿವಪ್ಪ, ಉಪ ವಿಭಾಗಾಧಿಕಾರಿ ಜಿ.ಪ್ರಭು, ತಹಶೀಲ್ದಾರ್‌ರಾದ ವಾಸುದೇವಾಚಾರ್ ಜಾಗೀರದಾರ್ (ಮಡಿಕೇರಿ), ಬಾಸ್ಕರ (ಸೋಮವಾರಪೇಟೆ), ಚಾಮು (ವಿರಾಜಪೇಟೆ), ಕಂದಾಯ ಇಲಾಖೆ ಉಪ ತಹಶೀಲ್ದಾರರು, ಮತ್ತಿತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry