ಅಟಲ್‌ ‘ಭಾರತ ರತ್ನ’

7

ಅಟಲ್‌ ‘ಭಾರತ ರತ್ನ’

Published:
Updated:

ನವದೆಹಲಿ (ಪಿಟಿಐ): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶುಕ್ರವಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತರತ್ನ’ವನ್ನು ಪ್ರದಾನ ಮಾಡಲಾಯಿತು.ಶಿಷ್ಟಾಚಾರ ಬದಿಗಿಟ್ಟು ವಾಜಪೇಯಿ   ಅವರ ನಿವಾಸಕ್ಕೆ ತೆರಳಿದ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಪ್ರಶಸ್ತಿ ಪ್ರದಾನ ಮಾಡಿದರು. ವಾಜಪೇಯಿ ಕಳೆದ ಹಲವಾರು ವರ್ಷಗಳಿಂದ ವೃದ್ಧಾಪ್ಯ ಸಹಜ  ಕಾಯಿಲೆಗಳಿಂದ ಬಳಲುತ್ತಿರುವುದರಿಂದ ಅವರ ನಿವಾಸದಲ್ಲಿಯೇ ಭಾರತ ರತ್ನ ಪ್ರದಾನ ಮಾಡಲು ಸರ್ಕಾರ ನಿರ್ಧರಿಸಿತ್ತು.ಉಪ ರಾಷ್ಟ್ರಪತಿ ಹಮೀದ್‌ ಅನ್ಸಾರಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್‌ ಸಿಂಗ್‌ ಮತ್ತು ವಾಜಪೇಯಿ ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry