ಸೋಮವಾರ, ಏಪ್ರಿಲ್ 12, 2021
25 °C

ಅಡಿಕೆ: ಕೇಂದ್ರಕ್ಕೆ ನಿಯೋಗ ಒಯ್ಯಲು ಸಿಎಂಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗುಟ್ಕಾ ಪ್ಯಾಕಿಂಗ್‌ನಲ್ಲಿ ಪ್ಲಾಸ್ಟಿಕ್ ಸ್ಯಾಶೆ ಬಳಕೆಗೆ ಪೂರಕವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಶೀಘ್ರದಲ್ಲಿ ನಿಯೋಗ ಕೊಂಡೊಯ್ಯುವಂತೆ ಒತ್ತಾಯಿಸಿ ಅಡಿಕೆ ಬೆಳೆಗಾರರ ಕ್ಷೇತ್ರದ ಶಾಸಕರು ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.ವಿಧಾನಸಭೆಯಲ್ಲಿನ ಸರ್ಕಾರದ ಮುಖ್ಯ ಸಚೇತಕ ಡಿ.ಎನ್.ಜೀವರಾಜ್ ಮತ್ತು ವಿರೋಧಪಕ್ಷದ ಸಚೇತಕ ಕೆ.ಅಭಯಚಂದ್ರ ಜೈನ್ ನೇತೃತ್ವದಲ್ಲಿ ವಿಧಾನಸಭೆಯ ಮೊಗಸಾಲೆಯಲ್ಲಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕರನ್ನು ಪ್ರತ್ಯೇಕವಾಗಿ ಭೇಟಿಮಾಡಿದ ಶಾಸಕರು, ಅಡಿಕೆ ಬೆಳೆಗಾರರ ರಕ್ಷಣೆಗೆ ಬರುವಂತೆ ಮನವಿ ಸಲ್ಲಿಸಿದರು.ರಾಜ್ಯದಿಂದ ತಕ್ಷಣವೇ ದೆಹಲಿಗೆ ಉನ್ನತಮಟ್ಟದ ನಿಯೋಗ ಕೊಂಡೊಯ್ಯಬೇಕು. ಗುಟ್ಕಾ ಪ್ಯಾಕಿಂಗ್‌ನಲ್ಲಿ ಪ್ಲಾಸ್ಟಿಕ್   ಸ್ಯಾಶೆ ಬಳಕೆಗೆ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿಕೊಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಬೆಲೆ ಕುಸಿತದಿಂದ ಕಂಗಾಲಾಗಿರುವ ಅಡಿಕೆ ಬೆಳೆಗಾರರನ್ನು ರಕ್ಷಿಸಲು ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರವನ್ನು ಆಗ್ರಹಿಸಬೇಕು ಎಂದು ಈ ಶಾಸಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.