ಬೆಂಗಳೂರು: ಬೆಲೆ ಕುಸಿತದಿಂದ ತೀವ್ರ ಸಂಕಷ್ಟದಲ್ಲಿರುವ ಅಡಿಕೆ ಮತ್ತು ತೆಂಗು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವಂತೆ ಒತ್ತಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ನಿಯೋಗ ಕೊಂಡೊಯ್ಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ವಿವಿಧ ರೈತ ಸಂಘಟನೆಗಳ ಮುಖಂಡರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಭರವಸೆ ನೀಡಿದರು. ರೈತರ ಕಷ್ಟವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು. ಈ ಬಗ್ಗೆ ಚರ್ಚಿಸಲು ಇದೇ 16ರಂದು ಸರ್ವಪಕ್ಷ ಸಭೆ ಕರೆಯಲಾಗುವುದು ಎಂದರು. ಬೆಲೆ ಕುಸಿತ ತಡೆಯಲು ಅಡಿಕೆ ಮತ್ತು ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಪ್ರಕಟಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ರೈತ ನಾಯಕರಿಗೆ ಮುಖ್ಯಮಂತ್ರಿ ಆಶ್ವಾಸನೆ ನೀಡಿದರು.

ಬೆಳೆಗಾರರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಭರವಸೆ ಸರ್ಕಾರ ನೀಡಿದ್ದರಿಂದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ತಿಪಟೂರಿನಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಅರ್ಧಕ್ಕೆ ಸ್ಥಗಿತಗೊಳಿಸಿದೆ. ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ‘ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಮತ್ತು ಕೇಂದ್ರ ಸಚಿವರು 16ರಂದು ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ’ ಎಂದರು.

ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ‘ಸಂಕಷ್ಟದಲ್ಲಿರುವ ಬೆಳೆಗಾರರ ನೆರವಿಗೆ ಧಾವಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಆಶ್ರಯದಲ್ಲಿ ಇದೇ 10ರಂದು ರೈತರು ತಿಪಟೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಆರಂಭಿಸಿದ್ದರು. ಆದರೆ, ಇದೀಗ ಸಮಸ್ಯೆಗೆ ಪರಿಹಾರ ಒದಗಿಸುವುದಾಗಿ ಮುಖ್ಯಮಂತ್ರಿ ಹೇಳಿರುವುದರಿಂದ ಪಾದಯಾತ್ರೆಯನ್ನು ತುಮಕೂರಿನಲ್ಲಿ ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಲಾಗಿದೆ. 15ರಂದು ವಿಧಾನಸೌಧದ ಮುಂಭಾಗದಲ್ಲಿ ಪಾದಯಾತ್ರೆ ಅಂತ್ಯಗೊಳ್ಳಬೇಕಿತ್ತು’ ಎಂದರು.

‘ಕ್ವಿಂಟಲ್ಗೆ ₹ 17 ಸಾವಿರ ಇದ್ದ ಕೊಬ್ಬರಿ ಬೆಲೆ ಈಗ ₹ 7 ಸಾವಿರಕ್ಕೆ ಇಳಿದಿದೆ. ಕ್ವಿಂಟಲ್ಗೆ ₹ 80 ಸಾವಿರ ಇದ್ದ ಅಡಿಕೆ ಬೆಲೆ ₹ 22 ಸಾವಿರಕ್ಕೆ ಕುಸಿದಿದೆ. ಬೆಳೆ ಕುಸಿತದಿಂದ ಮಂಗಳೂರು, ಉಡುಪಿ, ಕಾರವಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಹಾವೇರಿ, ಮೈಸೂರು, ಮಂಡ್ಯ ಮತ್ತು ಚಾಮರಾಜ ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ’ ಎಂದೂ ಕಳವಳ ವ್ಯಕ್ತಪಡಿಸಿದರು.

‘ನಾವು ಆರ್ಥಿಕ ವರ್ಷದ ಮಧ್ಯದಲ್ಲಿ ಇರುವುದರಿಂದ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಸಾಧ್ಯವಿಲ್ಲ. ಹೀಗಾಗಿ ಪ್ರಧಾನ ಮಂತ್ರಿ ವಿಶೇಷ ನಿಧಿಯಿಂದ ಕ್ವಿಂಟಲ್ ಕೊಬ್ಬರಿಗೆ ₹ 15 ಸಾವಿರ ಮತ್ತು ಕ್ವಿಂಟಲ್ ಅಡಿಕೆಗೆ ₹ 45 ಸಾವಿರವನ್ನು ಬೆಳೆಗಾರರಿಗೆ ಬೋನಸ್ ಆಗಿ ನೀಡಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ಸರ್ವಪಕ್ಷ ಸಭೆಯ ತೀರ್ಮಾನ ನೋಡಿಕೊಂಡು ನಮ್ಮ ಮುಂದಿನ ನಡೆ ನಿರ್ಧರಿಸುತ್ತೇವೆ. ಅಡಿಕೆ, ತೆಂಗು ಉತ್ಪನ್ನಗಳು ಸೇರಿದಂತೆ ವಿದೇಶದಿಂದ ದೇಶಕ್ಕೆ ಆಮದಾಗುವ ವಸ್ತುಗಳಿಗೆ ಹೆಚ್ಚಿನ ಸುಂಕ ವಿಧಿಸಬೇಕು’ ಎಂದೂ ಒತ್ತಾಯಿಸಿದರು.

ತೆಂಗು, ಅಡಿಕೆ ಬೆಲೆ ಕುಸಿತದ ಬಗ್ಗೆ ರಾಜ್ಯದ ಸಂಸದರಾದ ಮುದ್ದಹನುಮೇಗೌಡ, ಆರ್. ಧ್ರುವನಾರಾಯಣ ಹಾಗೂ ಎಂ. ಚಂದ್ರಪ್ಪ ಅವರು ಲೋಕಸಭೆಯಲ್ಲಿ ಅನೇಕ ಸಲ ಕಳವಳ ವ್ಯಕ್ತಪಡಿಸಿದ್ದಾರೆ. ಕೇಂದ್ರ ಕೃಷಿ ಸಚಿವರನ್ನೂ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.