ಭಾನುವಾರ, ಮೇ 16, 2021
28 °C

ಅಡಿಕೆ ಬೆಳೆಗಾರರಿಗೆ ಆರ್ಥಿಕ ಉತ್ತೇಜನ ಬೇಡಿಕೆ ಪರಿಶೀಲನೆ: ಪ್ರಣವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕರ್ನಾಟಕದಲ್ಲಿ ಸಣ್ಣ ಹಾಗೂ ಅತಿ ಸಣ್ಣ ಅಡಿಕೆ ಬೆಳೆಗಾರರಿಗೆ ಆರ್ಥಿಕ ಉತ್ತೇಜನ ನೀಡುವ ಬೇಡಿಕೆಯನ್ನು ಪರಿಶೀಲಿಸುವುದಾಗಿ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರು ರಾಜ್ಯ ಕಾಂಗ್ರೆಸ್ ಮುಖಂಡರಿಗೆ ಭರವಸೆ ನೀಡಿದ್ದಾರೆ.ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿ.ಪರಮೇಶ್ವರ್, ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಶುಕ್ರವಾರ ಸಮಾಲೋಚನೆ ನಡೆಸಿ ಹೀಗೆ ಹೇಳಿದರು.ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹಮ್ಮದ್ ಪಟೇಲ್, ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿರುವ ಮಧುಸೂಧನ್ ಮಿಸ್ತ್ರಿ ಇದ್ದರು.ಅಡಿಕೆ ಬೆಳೆಗಾರರ ಸಮಸ್ಯೆಗೆ ಸಂಬಂಧಿಸಿದಂತೆ ಗೋರಖ್ ಸಿಂಗ್ ಸಮಿತಿ ವರದಿಯನ್ನು ಕೇಂದ್ರವು ಅನುಷ್ಠಾನಗೊಳಿಸಬೇಕು ಎಂದು ರಾಜ್ಯದ ಮುಖಂಡರು ಒತ್ತಾಯಿಸಿದರು.ರೇಷ್ಮೆ ಬೆಳೆಗಾರರು, ನೇಕಾರರು ಹಾಗೂ ಈ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಇತರರಿಗೆ ಆರ್ಥಿಕ ಉತ್ತೇಜನ ನೀಡುವುದಾಗಿಯೂ ಮುಖರ್ಜಿ ಭರವಸೆ ನೀಡಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, `ಇದೇ 24ರಂದು ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ಆರ್ಥಿಕ ಉತ್ತೇಜನ ಪ್ರಕಟಿಸುವುದಾಗಿ ಪ್ರಣವ್ ಆಶ್ವಾಸನೆ ನೀಡಿದ್ದಾರೆ~ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.