ಮೂಡಿಗೆರೆ: ರಾಜ್ಯದ ಅಡಿಕೆ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಡಿಕೆ ಬೆಳೆಗಾರರ ಸಾಲಮನ್ನಾ ಯೋಜನೆ ಜಾರಿಗೆ ತರುವ ಚಿಂತನೆ ನಡೆಸಿವೆ ಎಂದು ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

ತಾಲ್ಲೂಕಿನ ಬಣಕಲ್ ಹೋಬಳಿಯ ಬಣಕಲ್ ಮತ್ತಿಕಟ್ಟೆ ರಸ್ತೆ ಕಾಮಗಾರಿಗೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಬಾರಿ ಮಲೆನಾಡಿನಲ್ಲಿ ಸುರಿದ ಮಳೆಯಿಂದಾಗಿ ಕಾಫಿ ಮತ್ತು ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಈ ನಿಟ್ಟಿನಲ್ಲಿ ಅಡಿಕೆ ಬೆಳೆಗಾರರ ಸಾಲ ಮನ್ನಾದ ಬಗ್ಗೆ ಚಿಂತನೆ ನಡೆಯುತ್ತಿದ್ದು, ಶೀಘ್ರವಾಗಿ ಕ್ರಮವಾಗಲಿದೆ ಎಂದರು.

ಮಲೆನಾಡಿನ ವಾಣಿಜ್ಯ ಬೆಳೆಯಾದ ಕಾಫಿಗೆ ಉತ್ತಮ ಧಾರಣೆಯಿದ್ದರೂ, ಕಳೆದ ವರ್ಷದ ಮಳೆಯಿಂದಾಗಿ ಕಾಫಿ ಬೆಳೆಯಿಲ್ಲದೇ ರೈತರು ಬೆಲೆಯಿದ್ದರೂ ನಷ್ಟ ಅನುಭವಿಸುವಂತಾಗಿದೆ. ಇದನ್ನು ಮನಗಂಡಿರುವ ಸರ್ಕಾರ ರೈತರ ಬಡ್ಡಿ ಮನ್ನಾದ ಬಗೆಯೂ ಚಿಂತನೆ ನಡೆಸಿದೆ ಎಂದರು.

ರೈತರಿಗೆ ಕಗ್ಗಂಟಾಗಿರುವ ಒತ್ತುವರಿ ಸಮಸ್ಯೆಯ ಬಗ್ಗೆ ಗಂಭಿರ ಚಿಂತನೆ ನಡೆಸಿದ್ದು, ಮೀಸಲು ಅರಣ್ಯದ ತಿದ್ದುಪಡಿ ಕ್ರಮಕ್ಕಾಗಿ ಶಿಫಾರಸ್ಸು ಮಾಡಲಾಗಿದೆ. ಕಂದಾಯ ಮತ್ತು ಅರಣ್ಯ ಭೂಮಿಯಲ್ಲಿ ಫಾರಂ 53 ಅಡಿ ಸಾಗುವಳಿ ಮಾಡಿರುವ ರೈತರ ಬಗ್ಗೆ ಸರ್ಕಾರಕ್ಕೆ ಕಾಳಜಿಯಿದ್ದು, ರೈತರಪರ ನಿಲುವಿಗೆ ಬದ್ಧವಾಗಿದೆ ಎಂದರು.

ಶಾಸಕ ಬಿ.ಬಿ.ನಿಂಗಯ್ಯ ಮಾತನಾಡಿ, ತಾಲ್ಲೂಕಿಗೆ ವಿವಿಧ ಅನುದಾನಗಳನ್ನು ತರಲಾಗಿದ್ದು, ಗ್ರಾಮೀಣ ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಪೂರ್ವಭಾವಿ ಕ್ರಮ ಕೈಗೊಳ್ಳಲಾಗಿದೆ ಎಂದರು. ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತೆ ಹಲವು ಯೋಜನೆಗಳ ಅಡಿ ಕಾಮಗಾರಿಗಳನ್ನು ಮಂಜೂರು ಮಾಡಿದ್ದು, ಸ್ಥಳೀಯರು ಕಾಮಗಾರಿಯ ಸೂಕ್ತ ಗುಣಮಟ್ಟದ ಬಗ್ಗೆ ನಿಗಾವಹಿಸಿ ಗ್ರಾಮದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದರು. ಕಾಮಗಾರಿಗಳ ಗುತ್ತಿಗೆಯಲ್ಲಿ ಯಾರೇ ಇದ್ದರೂ ಗುಣ ಮಟ್ಟದಲ್ಲಿ ಮಾತ್ರ ಯಾವುದೇ ರಾಜಿ ನಡೆಯಕೂಡದು ಎಂದರು.

ವಿಧಾನ ಪರಿಷತ್ ಸದಸ್ಯೆ ಗಾಯತ್ರಿಶಾಂತೇಗೌಡ ಮಾತ ನಾಡಿ, ಕಾಂಗ್ರೆಸ್ ಸರ್ಕಾರವು ಆಡಳಿತಕ್ಕೆ ಬರುವ ವೇಳೆ ಪ್ರಣಾಳಿಕೆಯಲ್ಲಿ ನೀಡಿದ ಬಹುತೇಕ ಭರವಸೆಗಳನ್ನು ಈಡೇರಿ ಸಿದೆ. ಮೂಲ ಸೌಕರ್ಯ ಸಮಸ್ಯೆಗಳಾದ ರಸ್ತೆ ಕುಡಿಯುವ ನೀರನ ಬಹುತೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದೀಗ ನಾಲ್ಕು ಕೋಟಿ ವೆಚ್ಚದಲ್ಲಿ ಬಣಕಲ್ ಮತ್ತಿಕಟ್ಟೆ ರಸ್ತೆಯ ಕಾಮಗಾರಿಯನ್ನು ಮಂಜೂರು ಮಾಡಲಾಗಿದೆ ಎಂದರು.

ಜಿ.ಪಂ. ಸದಸ್ಯೆ ಜ್ಯೋತಿ ಹೇಮಶೇಖರ್, ತಾ.ಪಂ. ಅಧ್ಯಕ್ಷ ಎಂ.ಎ. ಶೇಷಗಿರಿಕಳಸ, ಸದಸ್ಯ ಸಬ್ಲಿ ದೇವರಾಜ್, ಅಝಲಾಅಯೂಬ್, ಗ್ರಾ.ಪಂ. ಅಧ್ಯಕ್ಷೆ ಬಾಲಾಕ್ಷಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್, ಬ್ಲಾಕ್ ಅಧ್ಯಕ್ಷ ಎಂ.ಪಿ. ಮನು ಬಿದ್ರಹಳ್ಳಿ ಜಯರಾಂ, ಶಿವರಾಮ್ ಶೆಟ್ಟಿ ಮುಂತಾದವರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.