ಅಡಿಕೆ ಬೆಳೆಗಾರರ ಹಿತರಕ್ಷಣೆಗಾಗಿ ಮಂಡಳಿ

7

ಅಡಿಕೆ ಬೆಳೆಗಾರರ ಹಿತರಕ್ಷಣೆಗಾಗಿ ಮಂಡಳಿ

Published:
Updated:

ಬೆಳ್ತಂಗಡಿ: ಕೇಂದ್ರ ಸರ್ಕಾರ ಆಮದು ಶುಲ್ಕ ಹೆಚ್ಚಿಸಿರುವುದರಿಂದ ಅಡಿಕೆಗೆ ಬೆಲೆ ಜಾಸ್ತಿಯಾಗಿದೆ. ಅಡಿಕೆ ಬೆಳೆಗಾರರ ಹಿತರಕ್ಷಣೆಗಾಗಿ ಪ್ರತ್ಯೇಕ ಅಡಿಕೆ ಮಂಡಳಿ ರಚಿಸಲಾಗುವುದು. ರಬ್ಬರ್ ಕೃಷಿಗೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಕೇಂದ್ರ ಇಂಧನ ಸಚಿವ ಎಂ.ವೀರಪ್ಪ ಮೊಯಿಲಿ ಭರವಸೆ ನೀಡಿದರು.ಬೆಳ್ತಂಗಡಿಯಲ್ಲಿ ಗುರುನಾರಾಯಣ ಸಭಾಭವನದಲ್ಲಿ ಭಾನುವಾರ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ  ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಅನುದಾನವನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಬಳಕೆ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾವೇರಿ ನದಿ ನೀರು ಸಮಸ್ಯೆ ಪರಿಹರಿಸುವಲ್ಲಿ ಪ್ರಧಾನಿಯಷ್ಟೇ ಹೊಣೆಗಾರಿಕೆ ಮತ್ತು ಬದ್ಧತೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಪಕ್ಷ ರೈತರ ಹಾಗೂ ದೀನ ದಲಿತರ ಸೇವೆಗೆ ಕಟಿ ಬದ್ಧವಾಗಿದೆ. ಭೂ ನ್ಯಾಯ ಮಂಡಳಿ, ಮನೆ ನಿವೇಶನ ವಿತರಣೆ, ಅಕ್ರಮ - ಸಕ್ರಮ ಸಮಿತಿಯಲ್ಲಿ ಕಾನೂನಿನ ಹೆಸರಲ್ಲಿ ಬಡವರಿಗೆ ಅನ್ಯಾಯವಾಗುತ್ತಿದೆ ಹಾಗಾಗಿ ನಿಯಮಗಳನ್ನು ಪುನರ್ ಪರಿಶೀಲನೆ ನಡೆಸಿ ಬಡವರಿಗೆ ಸಹಾಯ ಮಾಡಲಾಗುವುದು ಎಂದರು.

ಜಾತಿ , ಮತ -ಭೇದ ಮರೆತು ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಸಂಘಟಿತರಾಗಿ ಪಕ್ಷದ ಬಲವರ್ಧನೆಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry