ಸೋಮವಾರ, ಮೇ 23, 2022
25 °C

ಅಡುಗೆ ಅನಿಲ: ಅಪಪ್ರಚಾರ ಸಲ್ಲದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಬ್ಸಿಡಿ ಇರುವ ಅಡುಗೆ ಅನಿಲ ಪೂರೈಕೆಯ ವಿಷಯದಲ್ಲಿ ಮಧ್ಯಪ್ರವೇಶ ಮಾಡುವ ಮತ್ತು ಅನರ್ಹರಿಗೆ ಅಡುಗೆ ಅನಿಲ ಸಿಲಿಂಡರ್ ಪೂರೈಸಬೇಡಿ ಎಂದು ವಿತರಕರಿಗೆ ಸೂಚನೆ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಕೆಲ ಸ್ಥಾಪಿತ ಹಿತಾಸಕ್ತಿಗಳು ಅಪಪ್ರಚಾರ ನಡೆಸುತ್ತಿವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಯಕ್ತ ಡಾ.ಎನ್.ವಿ. ಪ್ರಸಾದ್ ತಿಳಿಸಿದ್ದಾರೆ.2000ನೇ ಇಸವಿಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ‘ದ್ರವೀಕೃತ ಪೆಟ್ರೋಲಿಯಂ ಅನಿಲ (ನಿಯಂತ್ರಣ, ಪೂರೈಕೆ ಮತ್ತು ವಿತರಣೆ) ಆದೇಶ’ದ ಅನ್ವಯ ಅಗತ್ಯ ವಸ್ತುಗಳ ತಯಾರಿಕೆ, ಪೂರೈಕೆ ಮತ್ತು ವಿತರಣೆಯ ವಿಷಯದಲ್ಲಿ ಮಧ್ಯಪ್ರವೇಶಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ.ಸಬ್ಸಿಡಿ ಆಧಾರದಲ್ಲಿ ಒಂದು ಕುಟುಂಬಕ್ಕೆ ಒಂದು ಅಡುಗೆ ಅನಿಲ ಸಿಲಿಂಡರ್ ಮಾತ್ರ ಪೂರೈಸಬಹುದು. ಅಲ್ಲದೆ, ಈ ಆದೇಶ ವಿತರಕರ ಮೇಲೆಯೂ ಕೆಲವು ನಿರ್ಬಂಧಗಳನ್ನು ವಿಧಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.