ಅಡ್ಡಮತದ ತನಿಖೆ: ವರದಿಯಷ್ಟೇ ಬಾಕಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿರುವ ಕುರಿತು ಆಂತರಿಕ ತನಿಖೆ ನಡೆಸುತ್ತಿರುವ ಸಮಿತಿ ಸಂಬಂಧಿಸಿದವರ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯನ್ನು ಮಂಗಳವಾರ ಪೂರ್ಣಗೊಳಿಸಿದೆ. 3 ದಿನಗಳೊಳಗೆ ಕೆಪಿಸಿಸಿ ಅಧ್ಯಕ್ಷರಿಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ.
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ನಡೆದ ಪರಿಣಾಮವಾಗಿ ಕಾಂಗ್ರೆಸ್ನ ಅಧಿಕೃತ ಅಭ್ಯರ್ಥಿಗಳಲ್ಲಿ ಒಬ್ಬರಾದ ಇಕ್ಬಾಲ್ ಅಹ್ಮದ್ ಸರಡಗಿ ಸೋಲು ಅನುಭವಿಸಿದ್ದರು. ಈ ಬೆಳವಣಿಗೆ ಕಾಂಗ್ರೆಸ್ ಪಕ್ಷದಲ್ಲಿನ ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಅಡ್ಡ ಮತದಾನ ಕುರಿತು ಆಂತರಿಕ ತನಿಖೆ ನಡೆಸಲು ಮುಖಂಡ ವಿ.ಆರ್.ಸುದರ್ಶನ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.