ಬುಧವಾರ, ಮೇ 18, 2022
28 °C

ಅಡ್ವಾಣಿ ಯಾತ್ರೆ: ಭ್ರಷ್ಟರಿಗೆ ಅವಕಾಶ ನೀಡಬೇಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಜನ ಚೇತನ ಯಾತ್ರೆಯ ಅಂಗವಾಗಿ ನಗರದಲ್ಲಿ ಹಮ್ಮಿಕೊಂಡಿರುವ ಬಹಿರಂಗ ಸಭೆಯ ವೇದಿಕೆಯಲ್ಲಿ ಭ್ರಷ್ಟರಿಗೆ, ಕಳಂಕಿತರಿಗೆ ಅವಕಾಶ ನೀಡಬಾರದು ಎಂದು ಬಿಜೆಪಿ ಹಿರಿಯ ನಾಗರಿಕರ ವೇದಿಕೆ ಕಾರ್ಯಾಧ್ಯಕ್ಷ ಟಿ.ಗೋವಿಂದಪ್ಪ ಆಗ್ರಹಿಸಿದ್ದಾರೆ.ಭ್ರಷ್ಟಾಚಾರ ವಿರುದ್ಧ ಅಡ್ವಾಣಿ ಹಮ್ಮಿಕೊಂಡಿರುವ ಯಾತ್ರೆ ರಾಜ್ಯದ ಬಿಜೆಪಿ ನಾಯಕರಿಗೆ ಎಚ್ಚರಿಕೆಯ ಗಂಟೆ ಯಾಗಬೇಕು. ಲಕ್ಷಾಂತರ ಕಾರ್ಯಕರ್ತರ ಶ್ರಮದಿಂದ ಅಧಿಕಾರಕ್ಕೆ ಬಂದ ಬಿಜೆಪಿ, ಇಂದು ವಲಸಿಗರ, ಹೊಗಳುಭಟ್ಟರ ಪಕ್ಷವಾಗಿದೆ. ಕಾರ್ಯಕರ್ತರ ಮಾತಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇನ್ನಾದರೂ ಹಿರಿಯರ ಅಭಿಪ್ರಾ ಯಕ್ಕೆ ಮನ್ನಣೆ ನೀಡಿ ಉಳಿದ ಅವಧಿಗೆ ಉತ್ತಮ ಆಡಳಿತ ನೀಡಿದರೆ ಪಕ್ಷದ ಸಂಘಟನೆ ಬಲಪಡಿಸಲು ಸಾಧ್ಯವಾ ಗುತ್ತದೆ. ಇಲ್ಲದಿದ್ದರೆ ಬರುವ ದಿನಗಳಲ್ಲಿ ಪಕ್ಷವು ಹೇಳ ಹೆಸರಿಲ್ಲದಂತಾಗುತ್ತದೆ. ವ್ಯಕ್ತಿಗಿಂತ ಪಕ್ಷ ದೊಡ್ಡದು ಎನ್ನುವ ಸಂದೇಶ ಯಾತ್ರೆಯ ಮೂಲಕ ತಲುಪ ಬೇಕು ಎಂಬುದು ವೇದಿಕೆಯ ಆಶಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.