ಅಡ್ವಾಣಿ ರಥಯಾತ್ರೆ ಇಂದು ಕರಾವಳಿಗೆ

7

ಅಡ್ವಾಣಿ ರಥಯಾತ್ರೆ ಇಂದು ಕರಾವಳಿಗೆ

Published:
Updated:

ಮಂಗಳೂರು: ಹಿರಿಯ ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಅವರ ಜನಚೇತನ ರಥಯಾತ್ರೆ ಸೋಮವಾರ ಕರಾವಳಿಗೆ ಆಗಮಿಸಲಿದ್ದು, ಸ್ವಾಗತಕ್ಕೆ ಭರದ ಸಿದ್ಧತೆ ನಡೆದಿದೆ.  ಸೋಮವಾರ ಬೆಳಿಗ್ಗೆ 10.30ರ ವೇಳೆಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಬಳಿಕ ರಥಯಾತ್ರೆ ಮೂಲಕ ಉಡುಪಿಗೆ ತೆರಳಿ ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದಲ್ಲಿ ತಂಗುವರು.  ಮಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ 30,000, ಉಡುಪಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ 30,000 ಜನ ಭಾಗವಹಿಸುವರೆಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry