ಕೊರಟಗೆರೆ: ಬಿಜೆಪಿಯ ಅನೇಕ ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದರೂ ಅಡ್ವಾಣಿ ಭ್ರಷ್ಟಾಚಾರದ ವಿರುದ್ಧ ರಥಯಾತ್ರೆ ಕೈಗೊಳ್ಳುವುದಾಗಿ ಹೇಳುತ್ತಿರುವುದು ವಿಪರ್ಯಾಸ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಟೀಕಿಸಿದರು.

ತಾಲ್ಲೂಕಿನ ಕೋಳಾಲ ಹೋಬಳಿ ವಾಪ್ತಿಯಲ್ಲಿ ಗುರುವಾರ ಸುಮಾರು ರೂ. 16 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಳಂಕಿತ ಸಚಿವರು ಮತ್ತು ಮಾಜಿ ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವುದೇ ರೀತಿಯ ಕ್ರಮಕೈಗೊಳ್ಳದ ಪರಿಸ್ಥಿತಿಯಲ್ಲಿದೆ. ರಥಯಾತ್ರೆಗೆ ಹುಡ್ಕೋ ಹಗರಣ ಆರೋಪಿ ಅನಂತ್ಕುಮಾರ್ ಅವರನ್ನು ಸಂಚಾಲಕರನ್ನಾಗಿ ಮಾಡಿರುವುದು ಹಾಸ್ಯಾಸ್ಪದ ಎಂದರು.

ಸಮಸ್ಯೆ ಬಗೆಹರಿಸುವಲ್ಲಿ ಯಾವುದೇ ರಾಜಕೀಯ ಮಾಡದೇ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಬೇಕು. ಪಡಿತರ ಚೀಟಿ, ರಸ್ತೆ ಕಾಮಗಾರಿ, ಕುಡಿಯುವ ನೀರಿನ ಸಮಸ್ಯೆ ಶೀಘ್ರ ಪರಿಹಾರಕ್ಕೆ ಕೈಗೊಳ್ಳಲಾಗುವುದು. ಕೋಳಾಲ ಕಾಲೋನಿಗೆ ರೂ. 10 ಲಕ್ಷ ಅನುದಾನ ನೀಡುವ ಭರವಸೆ ನೀಡಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಡಾ. ರವಿ, ಸದಸ್ಯೆ ಪ್ರೇಮಾ ಮಹಾಲಿಂಗಪ್ಪ, ಟಿ.ಡಿ.ಪ್ರಸನ್ನಕುಮಾರ್, ಮಾಜಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ಮಾತನಾಡಿ ದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುಧಾ ಹನುಮಂತರಾಯಪ್ಪ, ಉಪಾಧ್ಯಕ್ಷೆ ಹನುಮಕ್ಕ ಹನುಮಂತ ರಾಯಪ್ಪ, ಸದಸ್ಯರಾದ ರವಿಕುಮಾರ್, ಜಿ.ಎಲ್. ಹನುಮಂತರಾಯಪ್ಪ, ಬಸವ ರಾಜು, ಮುಖಂಡರಾದ ಮಹಾ ಲಿಂಗಪ್ಪ, ಎ.ಡಿ.ಬಲರಾಮಯ್ಯ, ಮಾವತ್ತೂರು ಟಿ.ಮಂಜುನಾಥ್, ಮಯೂರ ಗೋವಿಂದರಾಜು, ಮೈಲಾರಪ್ಪ, ಗಿರೀಶ್, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ರವಿಕುಮಾರ್, ಸುರೇಶ್, ಇಒ ಎಂ.ಎ. ಗೋಪಾಲ್, ಬಿಇಒ ಮಹೇಶ್, ಇನ್ಸ್ಪೆಕ್ಟರ್ ಕೆ.ಆರ್.ಚಂದ್ರಶೇಖರ್, ಎಇಇ ಸಿದ್ದಗಂಗಯ್ಯ, ವಾಸುದೇವನ್, ತುಂಬಾಡಿ ಸೀನಪ್ಪ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.