ಶುಕ್ರವಾರ, ಏಪ್ರಿಲ್ 16, 2021
31 °C

ಅಣು ವಿದ್ಯುತ್ ಸ್ಥಾವರ: ಗ್ರಾಮಸ್ಥರಿಂದ ತೀವ್ರ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಶಾಖಪಟ್ಟಣಂ (ಪಿಟಿಐ): ಆಂದ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕುವ್ವಾಡ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ವಿರೋಧಿಸಿ ಇಲ್ಲಿಯ ರಣಸ್ಥಳಂ ಮಂಡಲ್ ಎಂಬಲ್ಲಿ ಗ್ರಾಮಸ್ಥರು ಶುಕ್ರವಾರ ಭಾರಿ ಪ್ರತಿಭಟನೆ ನಡೆಸಿದರು.’ಅಣು ವ್ಯತಿರಿಕ್ತ ಹೋರಾಟ ಸಮಿತಿ’ ನೇತೃತ್ವದಲ್ಲಿ ಸುತ್ತಮುತ್ತಲಿನ ಸುಮಾರು 150ಕ್ಕೂ ಹೆಚ್ಚು ಹಳ್ಳಿಗಳಿಂದ ಬಂದಿದ್ದ ಗ್ರಾಮಸ್ಥರು, ಯೋಜನೆಯನ್ನು ತೀವ್ರವಾಗಿ ಖಂಡಿಸಿದರು. ಜಪಾನ್‌ನಲ್ಲಿ ಭೂಕಂಪ ಹಾಗೂ ಸುನಾಮಿ ನಂತರ ವಿಕಿರಣ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ ಕುವ್ವಾಡ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಕಂದಾಯ ಅಧಿಕಾರಿಗೆ ಮನವಿ ಸಲ್ಲಿಸಿದರು.ಭಾರತೀಯ ಅಣುಶಕ್ತಿ ಮಂಡಳಿಯು ಕುವ್ವಾಡ ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಯೋಜನೆ ಸಿದ್ಧಪಡಿಸಿದ್ದು, 2000 ಎಕರೆ ಪ್ರದೇಶವನ್ನು ಯೋಜನೆಗಾಗಿ ಗುರುತಿಸಲಾಗಿದೆ ಎಂದು ಹೋರಾಟ ಸಮಿತಿಯ ಅಧ್ಯಕ್ಷ ಜಿ.ಕಿರಣ್ ಕುಮಾರ್ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.