ಚನ್ನಪಟ್ಟಣ: ತಾಲ್ಲೂಕಿನ ಇಗ್ಗಲೂರು ಶಿಂಷಾ ಜಲಾಶಯದ ಬಳಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಇದನ್ನು ಕೂಡಲೇ ತನಿಖೆಗೊಪ್ಪಿಸಬೇಕು. ಇಲ್ಲದಿದ್ದರೆ ಜಲಾಯಶಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಸಿ ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯರೊಬ್ಬರು 7 ಗಂಟೆಗೂ ಹೆಚ್ಚು ಕಾಲ ಇಗ್ಗಲೂರು ಡ್ಯಾಂ ಮೇಲೇರಿ ಕುಳಿತು ಅವಾಂತರ ಸೃಷ್ಟಿಸಿದ ಘಟನೆ ಶುಕ್ರವಾರ ಇಗ್ಗಲೂರಿನಲ್ಲಿ ನಡೆದಿದೆ. ತಾ.ಪಂ. ಮಾಜಿ ಸದಸ್ಯ ಸಿದ್ದರಾಮಯ್ಯ ಹೆಗ್ಗಡೆ ಬೆಳಿಗ್ಗೆ 7 ಗಂಟೆ ಸುಮಾರಿಗೆ ಡ್ಯಾಂ ಮೇಲೇರಿ ಕುಳಿತರು. ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಸ್ಥಳಕ್ಕೆ ಅಧಿಕಾರಿಗಳು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬರಬೇಕು. ಅಲ್ಲೆವರೆಗೂ ಸ್ಥಳಬಿಟ್ಟು ಕದಲುವುದಿಲ್ಲ. ಅವರ್ಯಾರೂ ಬರದಿದ್ದರೆ ಜಲಾಶಯಕ್ಕೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತೇನೆ ಎಂದು ಬೆದರಿಕೆ ಒಡ್ಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.