ಅಣ್ಣಾ ಬಂಧನ; ಎಬಿವಿಪಿ ರಸ್ತೆತಡೆ

7

ಅಣ್ಣಾ ಬಂಧನ; ಎಬಿವಿಪಿ ರಸ್ತೆತಡೆ

Published:
Updated:
ಅಣ್ಣಾ ಬಂಧನ; ಎಬಿವಿಪಿ ರಸ್ತೆತಡೆ

ಬೀದರ್: ಜನ ಲೋಕಪಾಲ್ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಆರಂಭಿಸುವ ಮುನ್ನವೇ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರನ್ನು ಬಂಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ನಗರದಲ್ಲಿ ಬುಧವಾರ ರಸ್ತೆತಡೆ ಚಳವಳಿ ನಡೆಸಲಾಯಿತು.ಬೆಳಿಗ್ಗೆ ಎಲ್ಲ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಲಾಯಿತು. ನಂತರ ಅಲ್ಲಿ ಮಾನವ ಸರಪಳಿ ರಚಿಸಿ ರಸ್ತೆತಡೆ ಮಾಡಲಾಯಿತು.ಅಣ್ಣಾ ಅವರ ಪ್ರತಿಭಟನೆಯನ್ನು ಹತ್ತಿಕ್ಕುವುದಕ್ಕಾಗಿ ಕೇಂದ್ರ ಸರ್ಕಾರ ಬಂಧನದ ಮಾರ್ಗ ಅನುಸರಿಸಿರುವುದು ತೀವ್ರ ಖಂಡನೀಯವಾಗಿದೆ ಎಂದು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪ್ರಮುಖರು ಹೇಳಿದರು.ಅಣ್ಣಾ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಹಾಗೂ ಜನ ಲೋಕಪಾಲ್ ಮಸೂದೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಭ್ರಷ್ಟ ಅಧಿಕಾರಿಗಳ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.ಪರಿಷತ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಗಮೇಶ, ನಗರ ಕಾರ್ಯದರ್ಶಿ ಪ್ರದೀಪ ಪಾಟೀಲ್, ಪ್ರಮುಖರಾದ ರಾಹುಲ್ ಗಾದಾ, ಸೋಮನಾಥ, ವಿನಾಯಕ ದೇಶಪಾಂಡೆ, ಅಂಬರೀಷ ಪವನ್, ರಾಜೇಶ ಶಶಿಧರ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry