ಶನಿವಾರ, ಜುಲೈ 31, 2021
27 °C

ಅಣ್ಣಾ ಮೈಸೂರು ಭೇಟಿ ಮುಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಭ್ರಷ್ಟಾಚಾರ ವಿರೋಧಿ ಚಳವಳಿಯ ರೂವಾರಿ ಅಣ್ಣಾ ಹಜಾರೆ ಅವರ ಮೈಸೂರು ಭೇಟಿ ಮುಂದಕ್ಕೆ ಹೋಗಿದೆ.ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಆಯೋಜಿಸಿದ್ದ ಪೂರ್ವ ನಿಗದಿತ ಕಾರ್ಯಕ್ರಮದ ಪ್ರಕಾರ ಮೇ 5 ರಂದು ಅಣ್ಣಾ ಹರಾಜೆ ನಗರಕ್ಕೆ ಭೇಟಿ ನೀಡಿ ದಸರಾ ವಸ್ತುಪ್ರದರ್ಶನ ಮೈದಾನ ಮತ್ತು ಎಚ್.ಡಿ. ಕೋಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಷಣ  ಮಾಡಬೇಕಿತ್ತು.ಅನಾರೋಗ್ಯದ ಹಿನ್ನೆಲೆಯಲ್ಲಿ ಹಜಾರೆ ಅವರ ಪ್ರಸಾಸವನ್ನು ಮುಂದೂಡಲಾಗಿದೆ.  ಮೇ 15ರ ಆಸುಪಾಸಿನಲ್ಲಿ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಡಾ.ಆರ್.ಬಾಲಸುಬ್ರಹ್ಮಣ್ಯಂ  ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.