ಬುಧವಾರ, ಏಪ್ರಿಲ್ 14, 2021
25 °C

ಅಣ್ಣಾ ಹಜಾರೆ ಅಮರಣಾಂತ ಉಪವಾಸ ಅಂತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 

 

ನವದೆಹಲಿ (ಐಎಎನ್ಎಸ್): ಇಲ್ಲಿನ ಜಂತರ್ ಮಂತರ್ ನಲ್ಲಿ ಕಳೆದ 96 ಗಂಟೆಗಳಿಂದ ಭ್ರಷ್ಟಾಚಾರದ ವಿರುದ್ಧ ಅಮರಣಾಂತ ಉಪವಾಸ ಕೈಗೊಂಡಿದ್ದ ಗಾಂಧಿವಾದಿ ಅಣ್ಣಾ ಹಜಾರೆ ಅವರು ಶನಿವಾರ ಬೆಳಿಗ್ಗೆ ತಮ್ಮ ನಿರಶನ ಅಂತ್ಯಗೊಳಿಸಿದರು.

ಬರುವ ಮುಂಗಾರು ಅಧಿವೇಶನದಲ್ಲಿ ಸಂಸತ್ತಿನಲ್ಲಿ ಭ್ರಷ್ಟಾಚಾರದ ವಿರುದ್ಧ ಇನ್ನಷ್ಟು  ಪರಿಣಾಮಕಾರಿಯಾಗಿರುವ ಮಸೂದೆ ರಚಸಿ ಮಂಡಿಸಲಾಗುವುದು ಎಂದು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ನೀಡಿದ ಭರವಸೆಯ ಮೇರೆಗೆ ಅಣ್ಣಾ ಹಜಾರೆ ಅವರು ತಮ್ಮ  ನಿರಶನವನ್ನು ಕೊನೆಗೊಳಿಸಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.