ಶುಕ್ರವಾರ, ಮೇ 27, 2022
21 °C

ಅಣ್ಣಾ ಹಜಾರೆ ಆಂದೋಲನಕ್ಕೆ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಭಾರತೀಯರು ವಿದೇಶಗಳಲ್ಲಿ ಇಟ್ಟಿರುವ ಕಪ್ಪು ಹಣವನ್ನು ವಾಪಸು ತರುವಂತೆ ಒತ್ತಾಯಿಸಿ ಹಾಗೂ ಭ್ರಷ್ಟಾಚಾರ ವಿರೋಧಿಸಿ ಅಣ್ಣಾ ಹಜಾರೆ ಆರಂಭಿಸಿದ್ದ ಹೋರಾಟವನ್ನು ಬೆಂಬಲಿಸಿ ಭಾನುವಾರ ನಗರದಲ್ಲೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಸಾಂಕೇತಿಕ ಧರಣಿ ನಡೆಸಿದರು.ನಗರದ ಹೇಮಾವತಿ ಪ್ರತಿಮೆ ಪಕ್ಕದಲ್ಲಿ ಭಾನುವಾರ ಮುಂಜಾನೆಯಿಂದ ಸಂಜೆವರೆಗೆ ಧರಣಿ ನಡೆಯಿತು.

`ನಮ್ಮ ರಾಜಕಾರಣಿಗಳು ವಿದೇಶದಲ್ಲಿ ಬಚ್ಚಿಟ್ಟಿರುವ 400 ಲಕ್ಷ ಕೋಟಿ ರೂಪಾಯಿಯನ್ನು ವಾಪಸು ತರಬೇಕು, ದೇಶದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರವನ್ನು ಮಟ್ಟಹಾಕಿ, ಭಾರತೀಯರಿಗೆ ಮೂಲ ಸೌಲಭ್ಯಗಳನ್ನು ಪಡೆಯಲು ಅನುಕೂಲ ಕಲ್ಪಿಸಬೇಕು.

 

ಭ್ರಷ್ಟಾಚಾರ ತಡೆಗಟ್ಟುವ ಸಲುವಾಗಿ ಕಠಿಣ ಕಾನೂನು ಜಾರಿ ಮಾಡಬೇಕು. ಸ್ವಾವಲಂಬಿ, ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಯೋಜನೆ ರೂಪಿಸಬೇಕು ಎಂದು ಕೇಂದ್ರವನ್ನು ಒತ್ತಾಯಿಸಲು ಈ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಆಂದೋಲನದಲ್ಲಿ ಪಾಲ್ಗೊಂಡಿದ್ದವರು ಹೇಳಿದರು.ರಾಮಸೇನೆಯ ಹೇಮಂತ್, ಹಿಂದೂ ಜಾಗರಣ ವೇದಿಕೆಯ ಹರ್ಷವರ್ಧನ, ರಾಜೀವೇಗೌಡ, ಭಾರತ್ ಸ್ವಾಭಿಮಾನ್ ಟ್ರಸ್ಟ್‌ನ ಜಿಲ್ಲಾ ಪ್ರಭಾರಿ ಶೇಷಪ್ಪ, ಇತರರು ಆಂದೋಲನದಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.