ಅಣ್ಣಾ ಹೋರಾಟಕ್ಕೆ ಬೆಂಬಲ

7

ಅಣ್ಣಾ ಹೋರಾಟಕ್ಕೆ ಬೆಂಬಲ

Published:
Updated:
ಅಣ್ಣಾ ಹೋರಾಟಕ್ಕೆ ಬೆಂಬಲ

ಶಿವಮೊಗ್ಗ: ಭ್ರಷ್ಟಾಚಾರದ ವಿರುದ್ಧ ಅಣ್ಣಾ ಹಜಾರೆ ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಗುರುವಾರ ಧರಣಿ, ಉಪವಾಸ ಸತ್ಯಾಗ್ರಹ ನಡೆಸಿದವು.ಕರ್ನಾಟಕ ಉಳಿಸಿ ಹೋರಾಟ ವೇದಿಕೆ ಕಾರ್ಯಕರ್ತರು, ನಗರದ ಗೋಪಿ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.ದೇಶಾದ್ಯಂತ ಭ್ರಷ್ಟಾಚಾರ ಪಿಡುಗಾಗಿ ಪರಿಣಮಿಸಿದ್ದು, ಇಡೀ ವ್ಯವಸ್ಥೆಯಲ್ಲಿ ಆಳವಾಗಿ ಬೇರು ಬಿಟ್ಟಿದೆ. ಇದನ್ನು ಬುಡಸಮೇತ ಕಿತ್ತುಹಾಕಲು ‘ಜನ ಲೋಕಪಾಲ ಮಸೂದೆ’   ಜಾರಿಗೆ ತರಲೇ ಬೇಕೆಂದು ಒತ್ತಾಯಿಸಿದರು.ಅದೇ ರೀತಿ, ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಜಿಲ್ಲಾ ಘಟಕದ ಕಾರ್ಯಕರ್ತರು, ಅಣ್ಣಾ ಹಜಾರೆ ಅವರ ಹೋರಾಟಕ್ಕೆ ಬೆಂಬಲವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಉಪವಾಸ ಸತ್ಯಾಗ್ರಹ  ನಡೆಸಿದರು.ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಕವಿ ಸತ್ಯನಾರಾಯಣರಾವ್ ಅಣತಿ, ರೈತ ಮುಖಂಡರಾದ ಕೆ.ಎಸ್. ಪುಟ್ಟಣ್ಣಯ್ಯ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry