ವಾಷಿಂಗ್ಟನ್/ನ್ಯೂಯಾರ್ಕ್ (ಪಿಟಿಐ): ಬರಾಕ್ ಒಬಾಮ ಅವರು 2009ರಲ್ಲಿ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಪಾಕಿಸ್ತಾನ ತನ್ನಲ್ಲಿನ ಅಣ್ವಸ್ತ್ರಗಳ ಸಂಗ್ರಹವನ್ನು ನಿಯಮಿತವಾಗಿ ಹೆಚ್ಚಿಸುತ್ತಿದೆ. ಅಲ್ಲದೇ ಅಣ್ವಸ್ತ್ರಗಳ ದಾಸ್ತಾನಿನಲ್ಲಿ ಅದು ಬ್ರಿಟನ್ ಹಾಗೂ ಫ್ರಾನ್ಸ್ ರಾಷ್ಟ್ರಗಳನ್ನು ಹಿಂದಿಕ್ಕುವ ಸನಿಹದಲ್ಲಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ಮಂಗಳವಾರ ವರದಿ ಮಾಡಿದೆ.

‘ಒಬಾಮ ಅಧಿಕಾರ ವಹಿಸಿಕೊಂಡ ಬಳಿಕ ಪಾಕಿಸ್ತಾನವು ತನ್ನ ಅಣ್ವಸ್ತ್ರಗಳ ಸಂಗ್ರಹವನ್ನು ನಿರಂತರವಾಗಿ ವಿಸ್ತರಿಸುತ್ತಿದೆ.

ಅಣ್ವಸ್ತ್ರಗಳ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುತ್ತಿದೆ. ಆ ಮೂಲಕ ಅದು ಅಣ್ವಸ್ತ್ರಗಳ ಸಂಗ್ರಹದಲ್ಲಿ ಬ್ರಿಟನ್ ಅನ್ನು ಹಿಂದಿಕ್ಕಿ ವಿಶ್ವದ ಐದನೇ ಅತಿ ದೊಡ್ಡ ಅಣ್ವಸ್ತ್ರ ರಾಷ್ಟ್ರ ಎಂದು ಕರೆಸಿಕೊಳ್ಳಲು ದಾಪುಗಾಲು ಇಡುತ್ತಿರುವುದನ್ನು ಅಮೆರಿಕದ ನೂತನ ಗುಪ್ತಚರ ಮಾಹಿತಿ ದೃಢಪಡಿಸಿದೆ’ ಎಂದು ನ್ಯೂಯಾರ್ಕ್ ಟೈಮ್ಸ್ ವರದಿಯಲ್ಲಿ ತಿಳಿಸಿದೆ.

ಪಾಕಿಸ್ತಾನ ತನ್ನ ಅಣ್ವಸ್ತ್ರಗಳ ಸಂಖ್ಯೆಯನ್ನು 110ಕ್ಕೆ ಏರಿಸಿದೆ ಎಂದು ‘ವಾಷಿಂಗ್ಟನ್ ಪೋಸ್ಟ್’ ವರದಿ ಪ್ರಕಟಿಸಿದ ಒಂದು ದಿನದ ಬಳಿಕ ‘ನ್ಯೂಯಾರ್ಕ್ ಟೈಮ್ಸ್’ ಈ ವರದಿ ಮಾಡಿದೆ.

‘ಒಂದು ವೇಳೆ ಈಗ ಅಂದಾಜಿಸಲಾಗಿರುವ ಅಂಕಿ ಅಂಶಗಳು ನಿಜವಾಗಿದ್ದರೆ ಪಾಕಿಸ್ತಾನ ವಿಶ್ವದ ಪ್ರಮುಖ ಅಣ್ವಸ್ತ್ರ ರಾಷ್ಟ್ರವಾಗಿ ರೂಪುಗೊಳ್ಳಲಿದೆ’ ಎಂದು ಟೈಮ್ಸ್ ಬರೆದಿದೆ.

‘ಭಾರತದ ಸಂಭಾವ್ಯ ದಾಳಿಯನ್ನು ತಡೆಯಲು ಬೇಕಾದಷ್ಟು ಅಣ್ವಸ್ತ್ರಗಳನ್ನು ಪಾಕಿಸ್ತಾನವು ಈಗಾಗಲೇ ಹೊಂದಿದೆ’ ಎಂದು ಹೆಸರು ಹೇಳಲಿಚ್ಛಿಸದ ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.