ದೇವನಹಳ್ಳಿ: ಕಳೆದ ಫೆಬ್ರುವರಿ 10 ರಂದು ನಡೆದ ನವೋದಯ ಪರೀಕ್ಷಾ ಫಲಿತಾಂಶ ಇನ್ನೂ ಬಾರದ ಹಿನ್ನೆಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಅತಂತ್ರ ಸ್ಥಿತಿ ಎದುರಿಸುವಂತಾಗಿದೆ.

ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸಿಕೊಳ್ಳಲು ಕೇಂದ್ರ ಸರ್ಕಾರದ ನವೋದಯ ಶೈಕ್ಷಣಿಕ ಇಲಾಖೆ ಪರೀಕ್ಷೆ ನಡೆಸಿತ್ತು. ಪರೀಕ್ಷೆ ನಡೆದು ನಾಲ್ಕು ತಿಂಗಳು ಕಳೆದರೂ ಫಲಿತಾಂಶ ಪ್ರಕಟವಾಗದಿರುವುದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಆತಂಕ ಎದುರಾಗಿದೆ.

ರಾಮನಗರ ಜಿಲ್ಲೆ ಹೊರತು ಪಡಿಸಿ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ 131, ದೊಡ್ಡಬಳ್ಳಾಪುರ 173, ಹೊಸಕೋಟೆ 166, ನೆಲಮಂಗಲ 128 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 598 ಸರ್ಕಾರಿ ಹಾಗೂಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಶೇ 25ರಷ್ಟು ಬಾಲಕ ಹಾಗೂಬಾಲಕಿಯರು ಪರೀಕ್ಷೆ ಬರೆದಿದ್ದರು.

`ಫಲಿತಾಂಶ ವಿಳಂಬದಿಂದ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಬೇಕೋ, ಬೇಡವೋ ಎಂಬ ಗೊಂದಲ ಉಂಟಾಗಿದೆ. ರಾಜ್ಯ ಸರ್ಕಾರದ ಆದೇಶ ದ ಅನ್ವಯ ಮಕ್ಕಳ ಶಿಕ್ಷಣ ಕಾಯ್ದೆಯಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಶೇ 25ರಷ್ಟು ಮೀಸಲಾತಿ ನೀಡಿ ಏಪ್ರಿಲ್ ತಿಂಗಳಿಂದಲೇ ದಾಖಲಾತಿ ಮುಕ್ತಾಯಗೊಳಿಸಲಾಗಿದೆ. ಖಾಸಗಿ ಶಾಲೆಗಳು ಬೇಸಿಗೆ ರಜೆಯಲ್ಲಿಯೇ ದಾಖಲಾತಿ ಆರಂಭಿಸಿವೆ. ಪ್ರತಿ ವರ್ಷ ಮೇ ತಿಂಗಳಲ್ಲಿ ಫಲಿತಾಂಶ ಪ್ರಕಟವಾಗುತ್ತಿತ್ತು. ಈ ಬಾರಿ ಸಾಕಷ್ಟು ವಿಳಂಬವಾಗಿದೆ. ನವೋದಯ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಅಂತಿಮ ಕ್ಷಣದಲ್ಲಿ ದುಬಾರಿ ಹಣ ಕೊಟ್ಟು ಖಾಸಗಿ ಶಾಲೆಗೆ ದಾಖಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂಬುದು ಪೋಷಕರ ಅಳಲು. ಕೇಂದ್ರ ಸರ್ಕಾರ ನವೋದಯ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಯೋಜನೆ ಮೆಚ್ಚುವಂತದ್ದು. ಆದರೆ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ. ಪರೀಕ್ಷೆ ಬರೆದವರೆಲ್ಲರಿಗೂ ಅವಕಾಶ ಸಿಗುವುದಿಲ್ಲ. ಅನುತ್ತೀರ್ಣರಾದ ಮಕ್ಕಳಿಗೆ ಬೇರೆ ಶಾಲೆಗಳಲ್ಲಿ ದಾಖಲಾತಿ ಸಿಗುವುದು ಕಷ್ಟವಾಗುತ್ತದೆ.

ಅಲ್ಲದೆ ಈಗಾಗಲೇ ಕೆಲವು ಶಾಲೆಗಳಲ್ಲಿ ಕಿರು ಪರೀಕ್ಷೆ ಪ್ರಾರಂಭಗೊಂಡಿದೆ. ಹೀಗಾದರೆ ಮಕ್ಕಳ ಗತಿಯೇನು. ಶಿಕ್ಷಣ ಇಲಾಖೆಯವರು ಈ ಕುರಿತು ಸ್ಪಷ್ಟ ಮಾಹಿತಿ ನೀಡುತ್ತಿಲ್ಲ ಎಂದು ಶಾಲಾ ಶಿಕ್ಷಕ ಶೆಟ್ಟಿನಾಯ್ಕ ಹಾಗೂ ಚಂದ್ರಶೇಖರ್ ಹೇಳಿದರು.

ಕ್ಷೇತ್ರಶಿಕ್ಷಣಾಧಿಕಾರಿ ಪ್ರತಿಕ್ರಿಯೆ: ನವೋದಯ ಪರೀಕ್ಷಾ ಫಲಿತಾಂಶ ವಿಳಂಬವಾಗಿದೆ ನಿಜ. ಆದರೆ ನವೋದಯ ಶಾಲಾ ಪ್ರಾಂಶುಪಾಲರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದೇನೆ. ಒಂದು ವಾರದಲ್ಲಿ ಫಲಿತಾಂಶ ಪ್ರಕಟವಾಗಬಹುದು ಎಂದು ತಿಳಿಸಿದ್ದಾರೆ. ಎಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದರು ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನವೋದಯ ಶಾಲಾ ಆಡಳಿತ ಅಧಿಕಾರಿಗಳೇ ಪರೀಕ್ಷೆ ನಡೆಸಿದ್ದಾರೆ ಎಂದು ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿ ಮುನಿರಾಜು ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.