ಭಾನುವಾರ, ಮೇ 22, 2022
21 °C

ಅತಿಯಾದ ಮೊಬೈಲ್ ಬಳಕೆ: ನಿದ್ರಾಹೀನತೆ, ಖಿನ್ನತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸ್ಟಾಕ್‌ಹೋಂ (ಪಿಟಿಐ):  ಯುವಜನರು ಮೊಬೈಲ್ ಹಾಗೂ ಕಂಪ್ಯೂಟರ್‌ಗಳನ್ನು ಅತಿಯಾಗಿ ಬಳಸಿದರೆ ನಿದ್ರಾಹೀನತೆ ಹಾಗೂ ಮಾನಸಿಕ ಒತ್ತಡದಿಂದ ಬಳಲಬೇಕಾಗುತ್ತದೆ ಎಂದು ಸಂಶೋಧನೆಯೊಂದು ಎಚ್ಚರಿಕೆ ನೀಡಿದೆ.ಮೊಬೈಲ್ ಹಾಗೂ ಕಂಪ್ಯೂಟರ್ ಅತಿಬಳಕೆಯಿಂದ ಯುವಜನರ ಮಾನಸಿಕ ಆರೋಗ್ಯದ ಮೇಲೆ ಆಗುವ ಪರಿಣಾಮಗಳನ್ನು ಗುರುತಿಸಲು   ಗುಟೆನ್‌ಬರ್ಗ್ ವಿಶ್ವವಿದ್ಯಾಲಯದ ಸಂಶೋಧಕಿ ಸಾರಾ ಥೊಮಿ, ನಾಲ್ಕು ವಿಭಿನ್ನ ರೀತಿಯ ಅಧ್ಯಯನ ನಡೆಸಿದ್ದಾರೆ.ಇದಕ್ಕಾಗಿ 20 ರಿಂದ 24 ವರ್ಷ ವಯೋಮಾನದ ಸುಮಾರು 4,100 ಮಂದಿಯನ್ನು ಸಮೀಕ್ಷೆಗೊಳಪಡಿಸಲಾಗಿತ್ತು. ಮಾಹಿತಿ ಹಾಗೂ ಸಂವಹನ ತಂತ್ರಜ್ಞಾನದ (ಐಸಿಟಿ) ಅತಿಯಾದ ಬಳಕೆಯು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುತ್ತಾರೆ ಥೊಮಿ.`ಅತಿಯಾದ ಮೊಬೈಲ್ ಬಳಕೆಯಿಂದ ಪುರುಷರಲ್ಲಿ ನಿದ್ರಾ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಮಹಿಳೆಯರಲ್ಲಿ ಖಿನ್ನತೆಯ ಲಕ್ಷಣಗಳು ಗೋಚರಿಸುತ್ತವೆ. ಸದಾ ಕಂಪ್ಯೂಟರ್ ಮುಂದೆ ಕೂತರೆ ಮಾನಸಿಕ ಒತ್ತಡ ಉಂಟಾಗುತ್ತದೆ~ ಎಂದೂ ಅವರು ಹೇಳುತ್ತಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.