ಗುರುವಾರ , ಮೇ 13, 2021
18 °C

ಅತ್ಯಾಚಾರಕ್ಕೆ ಯತ್ನ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಒಂಬತ್ತು ವರ್ಷದ ಬಾಲಕಿಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಶೇಕ್ ಅಮೀನುದ್ದೀನ್ (22) ಎಂಬಾತನನ್ನು ಭಾರತಿನಗರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.ನೆಹರುಪುರದ ಬಾಲಕಿ ಸಂಜೆ ಮದರಸಾದಲ್ಲಿ ತರಗತಿ ಮುಗಿಸಿಕೊಂಡು ಮನೆಗೆ ಹೊರಟಿದ್ದಳು. ಈ ಸಂದರ್ಭದಲ್ಲಿ ಮೂವರು ಯುವಕರು ಆಕೆಯನ್ನು ಸಮೀಪದ ಕಟ್ಟಡವೊಂದರ ಹಿಂಭಾಗಕ್ಕೆ ಎಳೆದೊಯ್ದು, ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಆಕೆ ಜೋರಾಗಿ ಅಳಲಾರಂಭಿಸಿದ್ದರಿಂದ ಗಾಬರಿಗೊಂಡ ಕಿಡಿಗೇಡಿಗಳು ಆಕೆಯನ್ನು ಬಿಟ್ಟು ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮನೆಗೆ ಬಂದ ಆಕೆ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಈ ಸಂಬಂಧ ಪೋಷಕರು ಠಾಣೆಗೆ ಬಂದು ದೂರು ನೀಡಿದರು. ಬಾಲಕಿಯ ಹೇಳಿಕೆಯ ಆಧಾರದ ಮೇಲೆ ನೆಹರುಪುರದ ಸಿದ್ಧ ಉಡುಪು ಮಾರಾಟ ಮಳಿಗೆವೊಂದರ ಕೆಲಸಗಾರ ಅಮೀನುದ್ದೀನ್‌ನನ್ನು ಬಂಧಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.