ಹೈಕೋರ್ಟ್ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸರಣಿ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಹೈಕೋರ್ಟ್, ಸರ್ಕಾರಕ್ಕೆ ಸೂಚನೆ ನೀಡಿದೆ. `ಕೆಲವು ಪ್ರಕರಣಗಳಲ್ಲಿ ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಪರ ಸಹಾನುಭೂತಿ ವ್ಯಕ್ತಪಡಿಸುವ ಬದಲು ಪೊಲೀಸರು ಅತ್ಯಾಚಾರಿಯ ಪರ ನಿಲ್ಲುತ್ತಾರೆ~ ಎಂದೂ ಹೈಕೋರ್ಟ್ ಮೌಖಿಕವಾಗಿ ಹೇಳಿದೆ.

ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿವೆ. ಪ್ರಕರಣಗಳ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು ಎಂದು ಕೋರಿ ಎಂ.ಕೆ. ವಿಜಯ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ ಈ ಸೂಚನೆ ನೀಡಿದೆ.

`ಇತ್ತೀಚೆಗೆ ಕೇವಲ 10 ದಿನಗಳ ಅವಧಿಯಲ್ಲಿ ಎಂಟು ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರನ್ನು ವರ್ಗಾವಣೆ ಮಾಡುತ್ತಿರುವ ಕಾರಣ, ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಲು ಅವರಿಂದ ಆಗುತ್ತಿಲ್ಲ~ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

`ನಮ್ಮ ಕೆಲವು ನಾಯಕರೇ ಮಹಿಳೆಯರ ಬಗ್ಗೆ ಗೌರವ ಭಾವನೆ ಹೊಂದಿಲ್ಲ. ಅಷ್ಟೇ ಅಲ್ಲ, ಕೆಲವು ಪ್ರಕರಣಗಳಲ್ಲಿ ಪೊಲೀಸರೇ ಅತ್ಯಾಚಾರಿಯ ಪರ ವಹಿಸುತ್ತಾರೆ. ದೌರ್ಜನ್ಯಕ್ಕೆ ಒಳಗಾದ ಹೆಣ್ಣಿನ ಬಗ್ಗೆ ಅವರಿಗೆ ಕರುಣೆ ಇರುವುದಿಲ್ಲ. ಅವರ ಕುಟುಂಬದ ಹೆಣ್ಣು ಮಕ್ಕಳು ದೌರ್ಜನ್ಯಕ್ಕೆ ಒಳಗಾದರೆ, ವಾಸ್ತವ ಅರ್ಥವಾಗಬಹುದು~ ಎಂದು ಮುಖ್ಯ ನ್ಯಾಯಮೂರ್ತಿ ಸೇನ್ ಹೇಳಿದರು.

`ಬಹುಪಾಲು ಚಲನಚಿತ್ರಗಳಲ್ಲಿ ಸೆಕ್ಸ್ ಮತ್ತು ಕೊಲೆಯ ದೃಶ್ಯಗಳನ್ನು ವೈಭವೀಕರಿಸಲಾಗುತ್ತದೆ. ಆದರೂ ಅಂಥ ಚಲನಚಿತ್ರಗಳ ಪಾತ್ರಧಾರಿಗಳು ನಮ್ಮ ಪಾಲಿಗೆ ಹೀರೊ ಆಗಿ ಕಾಣಿಸುತ್ತಾರೆ~ ಎಂದರು. ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಲಾಗಿದೆ.

ಮದನಿ: ಜಾಮೀನಿಗೆ ಮನವಿ
ಪಿಡಿಪಿ ಮುಖ್ಯಸ್ಥ, ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಅಬ್ದುಲ್ ನಾಸಿರ್ ಮದನಿಯ ಜಾಮೀನು ಅರ್ಜಿ ಕುರಿತ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.

`ಮದನಿಗೆ ವಯಸ್ಸಾಗಿದೆ, ಬೇರೆ ಬೇರೆ ಕಾಯಿಲೆಗಳೂ ಇವೆ. ಹಾಗಾಗಿ ಜಾಮೀನು ನೀಡಬೇಕು~ ಎಂದು ಮದನಿ ಪರ ವಕೀಲರು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ ಅವರಲ್ಲಿ ಬುಧವಾರ ಕೋರಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲರು, `ಮದನಿಗೆ ಬೆಂಗಳೂರಿನ ಜಯದೇವ, ಮಿಂಟೊ, ಸೌಖ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಮದನಿ ಹಲವು ವರ್ಷ ಕೊಯಮತ್ತೂರಿನ ಜೈಲಿನಲ್ಲಿದ್ದ. ಆಗಲೂ ಆತ ಕಾಯಿಲೆ ಪೀಡಿತನಾಗಿದ್ದ~ ಎಂದು ತಿಳಿಸಿದರು.

`ಮದನಿ ಚಿಕಿತ್ಸೆಗಾಗಿ 8.69 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ. ಅವನಿಗೆ ಯಾವ ಆಸ್ಪತ್ರೆಯಲ್ಲಿ ಯಾವ ರೀತಿಯ ಚಿಕಿತ್ಸೆ ಬೇಕು ಎಂದು ತಿಳಿಸಿದರೆ, ಪೊಲೀಸರ ರಕ್ಷಣೆಯಲ್ಲಿ ಚಿಕಿತ್ಸೆ ಕೊಡಿಸಲಾಗುವುದು. ಆದರೆ ಅವನಿಗೆ ಜಾಮೀನು ನೀಡಬಾರದು~ ಎಂದರು.

ಜಯಗೋಪಾಲ್ ಹಾಜರಿಗೆ ಆದೇಶ
ನಟಿ ಹೇಮಶ್ರೀ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಸುರೇಂದ್ರ ಬಾಬು ಅವರ ಸಹೋದರ ಜಯಗೋಪಾಲ್ ಅವರನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಹಾಜರುಪಡಿಸಲು ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದೆ.

ಸುರೇಂದ್ರ ಬಾಬು ಬಂಧನವಾದ ಒಂದೆರಡು ದಿನಗಳ ನಂತರ ಜಯಗೋಪಾಲ್ ನಾಪತ್ತೆಯಾಗಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅವರ ತಂದೆ ರಾಮಯ್ಯ, ಹೈಕೋರ್ಟ್ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಡಿ.ವಿ. ಶೈಲೇಂದ್ರ ಕುಮಾರ್ ಹಾಗೂ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ನಡೆಸಿತು. ಜಯಗೋಪಾಲ್ ತಮ್ಮ ವಶದಲ್ಲಿಲ್ಲ ಎಂದು ಪೊಲೀಸರು ನ್ಯಾಯಪೀಠಕ್ಕೆ ತಿಳಿಸಿದರು.

ಮುಂದಿನ ವಿಚಾರಣೆ ವೇಳೆ ಜಯಗೋಪಾಲ್ ಹಾಗೂ ರಾಮಯ್ಯ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ಪೊಲೀಸರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಕೇಂದ್ರದ ಅನುಮತಿಗೆ ಆದೇಶ
ಸಕಲೇಶಪುರದ ಕಾಗಿನೆರೆಯಲ್ಲಿ ಕಿರು ವಿದ್ಯುತ್ ಉತ್ಪಾದನಾ ಘಟಕವನ್ನು ನಿಯಮ ಉಲ್ಲಂಘಿಸಿ ಸ್ಥಾಪಿಸುತ್ತಿದೆ ಎಂಬ ಆರೋಪಕ್ಕೆ ಒಳಗಾಗಿರುವ ಮಾರುತಿ ಪವರ್ ಜೆನ್ ಕಂಪೆನಿಗೆ, ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯದ ಒಪ್ಪಿಗೆ ಪಡೆದುಕೊಳ್ಳಲು ಹೈಕೋರ್ಟ್ ಆದೇಶಿಸಿದೆ.

ಕಂಪೆನಿಯು ಕಿರು ವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸುವಾಗ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಕಂಪೆನಿಯು ವಿದ್ಯುತ್ ಉತ್ಪಾದನಾ ಘಟಕ ಆರಂಭಿಸಲು ಅನುಮತಿ ಕೋರಿ ಸಲ್ಲಿಸುವ ಅರ್ಜಿಯನ್ನು 30 ದಿನಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಪರಿಸರ ಹಾಗೂ ಅರಣ್ಯ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.