ಮಂಗಳವಾರ, ಡಿಸೆಂಬರ್ 10, 2019
26 °C

ಅತ್ಯಾಚಾರ ಆರೋಪ: ರಾಜಸ್ಥಾನ ಸಚಿವ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅತ್ಯಾಚಾರ ಆರೋಪ: ರಾಜಸ್ಥಾನ ಸಚಿವ ರಾಜೀನಾಮೆ

ಜೈಪುರ (ಪಿಟಿಐ): ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಜಸ್ಥಾನದ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಬಾಬುಲಾಲ್ ನಗರ್  ತಮ್ಮ ಮಂತ್ರಿ ಸ್ಥಾನಕ್ಕೆ ಗುರುವಾರ  ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ನಾನು ಯಾವುದೇ ತಪ್ಪು ಮಾಡಿಲ್ಲ, ಈ ಆರೋಪ ರಾಜಕೀಯ ದುರುದ್ದೇಶದಿಂದ ಕೂಡಿದೆ. ನ್ಯಾಯಸಮ್ಮತ ತನಿಖೆ ನಡೆಯುವ ಸಲುವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಾಬುಲಾಲ್ ತಿಳಿಸಿದರು.ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು ಎಂಬ ಸದುದ್ದೇಶದಿಂದ ರಾಜೀನಾಮೆ ಸಲ್ಲಿಸಿದ್ದೇನೆ. ತನಿಖೆಯ ಬಳಿಕ ನಿರಪರಾಧಿಯಾಗಿ ಹೊರಬರಲಿದ್ದೇನೆ ಎಂಬ ವಿಶ್ವಾಸವನ್ನು ಬಾಬುಲಾಲ್ ವ್ಯಕ್ತಪಡಿಸಿದರು.ಸೆಪ್ಟೆಂಬರ್ 11 ರಂದು ಸರ್ಕಾರಿ ಬಂಗಲೆಯಲ್ಲಿ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಬಾಬುಲಾಲ್ ಎದುರಿಸುತ್ತಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರತಿಕ್ರಿಯಿಸಿ (+)