ಅತ್ಯಾಚಾರ ಪ್ರಕರಣ: ಕೆಲವು ಯುವಕರ ವಿಚಾರಣೆ

7

ಅತ್ಯಾಚಾರ ಪ್ರಕರಣ: ಕೆಲವು ಯುವಕರ ವಿಚಾರಣೆ

Published:
Updated:

ಬೆಂಗಳೂರು: ನಗರದ ಜ್ಞಾನಭಾರತಿ ಬಳಿ ನೇಪಾಳ ಮೂಲದ ಕಾನೂನು ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪಶ್ಚಿಮ ವಿಭಾಗದ ಪೊಲೀಸರು, ಕೆಲ ಯುವಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.`ಸಿಬ್ಬಂದಿ ತನಿಖೆ ತೀವ್ರಗೊಳಿಸಿದ್ದಾರೆ. ಜ್ಞಾನಭಾರತಿ ಸುತ್ತಮುತ್ತಲ ಪ್ರದೇಶದಲ್ಲಿನ ಕೆಲ ಯುವಕರನ್ನು ವಿಚಾರಣೆಗೆ ಒಳಪಡಿ.ಲಾಗಿದೆ. ಪ್ರಕರಣ ಸಂಬಂಧ ಈವರೆಗೆ ಯಾರನ್ನೂ ವಶಕ್ಕೆ ತೆಗೆದುಕೊಂಡಿಲ್ಲ~ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಎನ್.ಸಿದ್ದರಾಮಪ್ಪ `ಪ್ರಜಾವಾಣಿ~ಗೆ ತಿಳಿಸಿದರು.ಜ್ಞಾನಭಾರತಿ ಆವರಣದಲ್ಲಿರುವ ವಿದ್ಯಾರ್ಥಿನಿಲಯಗಳಲ್ಲಿನ ವಿದ್ಯಾರ್ಥಿಗಳ ಚಲನವಲನಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಘಟನಾ ಸಮಯದ ಆಸುಪಾಸಿನಲ್ಲಿ ಜ್ಞಾನಭಾರತಿ ಆವರಣದಲ್ಲಿ ಸಂಚರಿಸಿರುವ ವ್ಯಕ್ತಿಗಳ ಮೊಬೈಲ್ ಕರೆಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗಿದೆ. ಈ ಮಾಹಿತಿ ಆಧರಿಸಿ ಕೆಲವರನ್ನು ವಶಕ್ಕೆ ಪಡೆದು ಪ್ರಶ್ನೆ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.`ದೂರು ನೀಡಿರುವ ಯುವತಿ, ಅತ್ಯಾಚಾರ ನಡೆದಿದೆ ಎಂಬ ಹೇಳಿಕೆಗೆ ಈಗಲೂ ಬದ್ಧವಾಗಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾಳೆ. ಆದರೆ, ಆಕೆಯ ಹೇಳಿಕೆಯನ್ನು ಪುಷ್ಟೀಕರಿಸುವ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ಅಲ್ಲದೇ, ವೈದ್ಯರು ನೀಡಿರುವ ಪ್ರಾಥಮಿಕ ವರದಿಯಲ್ಲೂ ಯುವತಿಯ ಮೇಲೆ ಅತ್ಯಾಚಾರ ನಡೆದಿರುವ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ~ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.ನಗರದಲ್ಲಿ ಈ ಹಿಂದೆ ಇದೇ ರೀತಿ ಸಾಮೂಹಿಕ ಅತ್ಯಾಚಾರ ಪ್ರಕರಣಗಳನ್ನು ಎಸಗಿದ್ದ ಆರೋಪಿಗಳ ಗುಂಪಿನ ಬಗ್ಗೆ ಮಾಹಿತಿ ಕಲೆ ಹಾಕಿ ತನಿಖೆ ನಡೆಸಲಾಗುತ್ತಿದೆ. ಅಂತಹ ಆರೋಪಿಗಳ ಕೆಲ ಗುಂಪುಗಳ ಬಗ್ಗೆ ಸುಳಿವು ಸಿಕ್ಕಿದ್ದು, ಅವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry