ಅತ್ಯಾಚಾರ ಪ್ರಕರಣ : ನ್ಯಾಯಾಂಗ ಆಯೋಗ ರಚನೆಗೆ ನಿರ್ಧಾರ

7

ಅತ್ಯಾಚಾರ ಪ್ರಕರಣ : ನ್ಯಾಯಾಂಗ ಆಯೋಗ ರಚನೆಗೆ ನಿರ್ಧಾರ

Published:
Updated:

ನವದೆಹಲಿ (ಐಎಎನ್‌ಎಸ್) : ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ನ್ಯಾಯಾಂಗ ಆಯೋಗದಿಂದ ತನಿಖೆ ನಡೆಸಲು ಕೇಂದ್ರ ಸರ್ಕಾರ ಬುಧವಾರ ನಿರ್ಧರಿಸಿದೆ.

ದೆಹಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶೆ ಉಷಾ ಮೆಹ್ರಾ ನೇತೃತ್ವದ ನ್ಯಾಯಾಂಗ ಆಯೋಗವು ಪ್ರಕರಣದ ತನಿಖೆ ನಡೆಸಲಿದೆ ಎಂದು ಹಣಕಾಸು ಸಚಿವ ಪಿ. ಚಿದಂಬರಂ ಅವರು ಸಂಪುಟ ಸಭೆ ಬಳಿಕ ತಿಳಿಸಿದರು.ದೆಹಲಿಯ ಸಮೂಹಿಕ ಅತ್ಯಾಚಾರ ಪ್ರಕರಣ ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದಿರುವ ಚಿದಂಬರಂ ಅವರು,  ಅತ್ಯಾಚಾರ ಪ್ರಕರಣಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಮಹಿಳೆಯರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry