ಅತ್ಯಾಚಾರ ಪ್ರಕರಣ ಪೊಲೀಸ್ ವಶಕ್ಕೆ ಆರೋಪಿ

ಶನಿವಾರ, ಜೂಲೈ 20, 2019
28 °C

ಅತ್ಯಾಚಾರ ಪ್ರಕರಣ ಪೊಲೀಸ್ ವಶಕ್ಕೆ ಆರೋಪಿ

Published:
Updated:

ಉಡುಪಿ: ಮಣಿಪಾಲ ವಿಶ್ವವಿದ್ಯಾಲಯ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಆರೋಪಿ ಆನಂದನನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಲಯದ ಮುಂದೆ ಸೋಮವಾರ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆತನನ್ನು ಐದು ದಿನಗಳ ಕಾಲ ಪೊಲೀಸರ ವಶಕ್ಕೆ ಒಪ್ಪಿಸಿದೆ.ಆತ್ಮಹತ್ಯೆಗೆ ಯತ್ನಿಸಿ ಕಸ್ತೂರ ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆನಂದ ಗುಣಮುಖನಾದ ಹಿನ್ನೆಲೆಯಲ್ಲಿ ಬಂಧನ ಪ್ರಕ್ರಿಯೆ ನಡೆಸಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ  ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಹತ್ತು ದಿನಗಳ ಕಾಲ ಆರೋಪಿಯನ್ನು ವಶಕ್ಕೆ ನೀಡುವಂತೆ ತನಿಖಾಧಿಕಾರಿ ಸದಾನಂದ ತಿಪ್ಪಣ್ಣವರ್ ನ್ಯಾಯಾಧೀಶರಿಗೆ ಮನವಿ ಮಾಡಿದರು. ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ನ್ಯಾಯಾಧೀಶರಾದ ನಾಗಜ್ಯೋತಿ ಅವರು ಆದೇಶ ನೀಡಿದರು.ಪ್ರಕರಣದ ಇನ್ನೊಬ್ಬ ಆರೋಪಿ ಹರಿಪ್ರಸಾದ್‌ಗೆ ಡಿಎನ್‌ಎ ಪರೀಕ್ಷೆ ನಡೆಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಪೊಲೀಸ್ ವಶದಲ್ಲಿರುವ ಹರಿಪ್ರಸಾದ್‌ನನ್ನು ಅಧಿಕಾರಿಗಳು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಡಿಎನ್‌ಎ ಪರೀಕ್ಷೆ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಿದರು.ನ್ಯಾಯಾಲಯ ಸಮ್ಮತಿ ಸಿದೆ. ಇಬ್ಬರೂ ಆರೋಪಿಗಳಿಂದ ಅಗತ್ಯ ಮಾಹಿಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಪ್ರಕರಣದ ಪ್ರಮುಖ ರೋಪಿ ಯೋಗೀಶನ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry