ಅತ್ಯಾಚಾರ ಯತ್ನ: ಕೆಸ್ತೂರು ಗ್ರಾ.ಪಂ ಅಧ್ಯಕ್ಷ ಸದಸ್ಯತ್ವ ರದ್ದು

ಮದ್ದೂರು: ಮಹಿಳೆ ಮೇಲೆ ಆತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ತಾಲ್ಲೂಕಿನ ಕೆಸ್ತೂರು ಗ್ರಾ.ಪಂ ಅಧ್ಯಕ್ಷ ಆರ್.ಚಂದ್ರಹಾಸ ಅವರ ಗ್ರಾ.ಪಂ ಸದಸ್ಯತ್ವವನ್ನು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ ಅಧಿನಿಯಮ 1993ರ 43–ಎ(1) ಅನ್ವಯ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ದುರ್ನಡತೆ ಹಾಗೂ ತಲೆ ತಗ್ಗಿಸುವ ನಡತೆಯಿಂದ ತಪ್ಪಿತಸ್ಥನಾಗಿರುವುದು ಸಾಬೀತಾದ ಕಾರಣ ಸದಸ್ಯತ್ವವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧೀನ ಕಾರ್ಯದರ್ಶಿ ಟಿ.ವಿ.ಅರುಣ್ಕುಮಾರ್ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.