ಶನಿವಾರ, ಮೇ 15, 2021
23 °C

ಅತ್ಯಾಚಾರ ಯತ್ನ: ಪೊಲೀಸರ ವಶಕ್ಕೆ ಆರೋಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವಸೀಂ ಎಂಬಾತನನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಶ್ವತ್ಥನಗರ ಸಮೀಪದ ಸಾರಾಯಿಪಾಳ್ಯದ ಬಾಲಕಿ, ಸಂಜೆ 6.30ರ ಸುಮಾರಿಗೆ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಪಾನಮತ್ತನಾಗಿ ಅಲ್ಲಿಗೆ ಬಂದ ವಸೀಂ, ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿಯ ಚೀರಾಟ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು, ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.ಬಾಲಕಿಯ ತಂದೆ ಮಟನ್ ಅಂಗಡಿ ಇಟ್ಟುಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಬಾಲಕಿ ಹಾಗೂ ಆರೋಪಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ವರದಿ ಬಂದ ನಂತರ ಅತ್ಯಾಚಾರ ನಡೆದಿದೆಯೇ ಎಂಬುದು ಗೊತ್ತಾಗಲಿದೆ ಎಂದು ಹೆಣ್ಣೂರು ಪೊಲೀಸರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.