ಅತ್ಯಾಚಾರ ವಿರೋಧಿ ಪ್ರತಿಭಟನೆ ವೇಳೆ ಗಾಯಗೊಂಡಿದ್ದ ಪೇದೆ ಸಾವು

7

ಅತ್ಯಾಚಾರ ವಿರೋಧಿ ಪ್ರತಿಭಟನೆ ವೇಳೆ ಗಾಯಗೊಂಡಿದ್ದ ಪೇದೆ ಸಾವು

Published:
Updated:
ಅತ್ಯಾಚಾರ ವಿರೋಧಿ ಪ್ರತಿಭಟನೆ ವೇಳೆ ಗಾಯಗೊಂಡಿದ್ದ ಪೇದೆ ಸಾವು

ನವದೆಹಲಿ (ಪಿಟಿಐ): ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಖಂಡಿಸಿ ಇಂಡಿಯಾ ಗೇಟ್ ಬಳಿ ಭಾನುವಾರ ನಡೆದ ಪ್ರತಿಭಟನೆ ವೇಳೆ ಉಂಟಾದ ಹಿಂಸಾಚಾರದಲ್ಲಿ ಗಾಯಗೊಂಡಿದ್ದ ದೆಹಲಿ ಪೊಲೀಸ್ ಪೇದೆಯೊರ್ವ ಮಂಗಳವಾರ ಬೆಳಿಗ್ಗೆ ರಾಮಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಭಾನುವಾರ ನಡೆದ ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡು ರಾಮಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೆಹಲಿ ಪೊಲೀಸ್ ಪೇದೆ ಸುಭಾಷ್ ಚಂದ್ ತೋಮರ್ (47) ಅವರು ಮಂಗಳವಾರ ಬೆಳಿಗ್ಗೆ ಕೊನೆಯುಸಿರೆಳೆದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಖರ್‌ವಾಲ್ ನಗರ ಪ್ರದೇಶದ ಠಾಣೆಯಲ್ಲಿ ಕರ್ತವ್ಯದ ಮೇಲಿದ್ದ ಸುಭಾಷ್ ಅವರನ್ನು ಪ್ರತಿಭಟನೆ ಹಿನ್ನೆಲೆಯಲ್ಲಿ ಇಂಡಿಯಾ ಗೇಟ್ ಬಳಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಯ ತುರ್ತು ನೀಗಾ ಘಟಕದಲ್ಲಿ ಕೃತಕ ಉಸಿರಾಟ ವ್ಯವಸ್ಥೆಯಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry