ಬುಧವಾರ, ನವೆಂಬರ್ 20, 2019
20 °C

ಅಥರ್ಗಾ ಜಿ.ಪಂ. ಕ್ಷೇತ್ರ ಚುನಾವಣೆಗೆ ಅಧಿಸೂಚನೆ

Published:
Updated:

ವಿಜಾಪುರ: ಇಂಡಿ ತಾಲ್ಲೂಕಿನ ಅಥರ್ಗಾ ಜಿಲ್ಲಾ ಪಂಚಾಯಿತಿ ಮತಕ್ಷೇತ್ರಕ್ಕೆ ಆಗಸ್ಟ್ 5ರಂದು ಚುನಾವಣೆ ನಡೆಸಲು ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಅಧಿಸೂಚನೆ ಹೊರಡಿಸಿದ್ದಾರೆ.ಕಮಲಾಬಾಯಿ ದೇವೇಂದ್ರಪ್ಪ ಮಾಯವಂಶಿ ಅವರ ನಿಧನದಿಂದ ತೆರವಾಗಿರುವ ಈ ಸ್ಥಾನಕ್ಕೆ ಚುನಾವಣೆ ನಡೆಸಲಾಗುತ್ತಿದೆ.ಇದೇ 16 ರಂದು ನಾಮಪತ್ರ ಸಲ್ಲಿಕೆ ಆರಂಭ, 23ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. 24ರಂದು ನಾಮಪತ್ರ ಪರಿಶೀಲನೆ. 26ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ. ಆಗಸ್ಟ್ 5ರಂದು ಅಗತ್ಯ ಬಿದ್ದರೆ ಮತದಾನ ಹಾಗೂ ಆಗಸ್ಟ್ 8 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಏಣಿಕೆ ನಡೆಯಲಿದೆ ಎಂದು ಹೇಳಿದ್ದಾರೆ.ಮಕ್ಕಳ ಉಚಿತ ಆರೋಗ್ಯ ತಪಾಸಣೆ

ವಿಜಾಪುರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಐಸಿಡಿಎಸ್ ಯೋಜನೆಯಡಿ 6 ವರ್ಷದೊಳಗಿನ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನೆಗಡಿ, ಕೆಮ್ಮು, ಕಜ್ಜಿ, ಶೀತ ಇತರ ಕಾಯಿಲೆಗಳಿಂದ ಬಳಲುತ್ತಿರುವ ಮಕ್ಕಳು.ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು, ತೂಕ ಕಡಿಮೆ ಇರುವ ಮಕ್ಕಳನ್ನು ತಾಯಂದಿರುವ ಸಮೀಪದ ಅಂಗನವಾಡಿ ಕೇಂದ್ರಗಳಿಗೆ ಕರೆತಂದು ಅಲ್ಲಿರುವ ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞರ ಬಳಿ ತೋರಿಸಬೇಕು. ಈ ಆರೋಗ್ಯ ತಪಾಸಣೆ ಕಾರ್ಯಕ್ರಮ ಇದೇ 15ರ ವರೆಗೆ ನಡೆಯಲಿದೆ ಎಂದು ಉಪ ನಿರ್ದೇಶಕಿ ವಸಂತ ಪ್ರೇಮ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)