ಬೆಂಗಳೂರು: ರಾಜ್ಯದ ಐವರು ಮಾಜಿ ಮುಖ್ಯಮಂತ್ರಿಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನವೇ ಎಲ್ಲರೂ ಪ್ರಚಾರಕ್ಕೆ ಧುಮುಕಿದ್ದು, ಬೆಂಬಲ ಯಾಚಿಸುವುದರಲ್ಲಿ ನಿರತರಾಗಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯಿಲಿ ಮತ್ತು ಧರ್ಮಸಿಂಗ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಮತ್ತೆ ಲೋಕಸಭಾ ಚುನಾವಣಾ ಕಣಕ್ಕಿಳಿಯಲಿದ್ದಾರೆ. ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಡಿ.ವಿ.ಸದಾನಂದ ಗೌಡ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರು ತಮ್ಮ ತವರು ಜಿಲ್ಲೆ ಹಾಸನದಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷಿಸಲು ಹೊರಟಿದ್ದಾರೆ.

ಪೆಟ್ರೋಲಿಯಂ ಸಚಿವರಾಗಿರುವ ಮೊಯಿಲಿ ಎರಡನೇ ಬಾರಿಗೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲೇ ಚುನಾವಣೆ ಎದುರಿಸುತ್ತಿದ್ದಾರೆ. ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಜೆಡಿಎಸ್ ಈ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ.

ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಧರ್ಮಸಿಂಗ್, 15ನೇ ಲೋಕಸಭೆಯಲ್ಲಿ ಬೀದರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕಾಂಗ್ರೆಸ್ ಅವರನ್ನು ಮತ್ತೊಮ್ಮೆ ಅಖಾಡಕ್ಕಿಳಿಸುತ್ತಿದೆ. ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಇಲ್ಲಿ ಜೆಡಿಎಸ್ ಅಭ್ಯರ್ಥಿ. ಬಿಜೆಪಿ ಇನ್ನೂ ಉಮೇದುವಾರರನ್ನು ಹೆಸರಿಸಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೊದಲ ಬಾರಿಗೆ ಲೋಕಸಭಾ ಚುನಾವಣೆ ಎದುರಿಸುತ್ತಿದ್ದಾರೆ.

ಶಿವಮೊಗ್ಗ ಸಂಸದ ಪುತ್ರ ಬಿ.ವೈ.ರಾಘವೇಂದ್ರ ಬದಲಿಗೆ ಯಡಿಯೂರಪ್ಪ ಅವರೇ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಪುತ್ರಿ ಹಾಗೂ ಚಿತ್ರನಟ ಶಿವರಾಜ್ಕುಮಾರ್ ಪತ್ನಿ ಗೀತಾ ಅವರು ಯಡಿಯೂರಪ್ಪ ಎದುರು ಜೆಡಿಎಸ್ ಅಭ್ಯರ್ಥಿಯಾಗಿ ಅದೃಷ್ಟ ಪರೀಕ್ಷೆಗೆ ಹೊರಟಿದ್ದಾರೆ. ಉದ್ಯಮಿ ಮಂಜುನಾಥ ಭಂಡಾರಿ ಅವರನ್ನು ಕಾಂಗ್ರೆಸ್ ಇಲ್ಲಿ ಕಣಕ್ಕಿಳಿಸುತ್ತಿದೆ.

ಕರಾವಳಿ ಮೂಲದ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಹಾಲಿ ಸಂಸದ ಡಿ.ಬಿ.ಚಂದ್ರೇಗೌಡ ಅವರಿಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿ, ಸದಾನಂದ ಗೌಡ ಅವರನ್ನು ಸ್ಪರ್ಧೆಗಿಳಿಸುತ್ತಿದೆ. ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಜೆಡಿಎಸ್ ಈ ಕ್ಷೇತ್ರದ ಅಭ್ಯರ್ಥಿಗಾಗಿ ಇನ್ನೂ ಹುಡುಕಾಟ ನಡೆಸುತ್ತಿದೆ.

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ಸತತ ಮೂರನೇ ಗೆಲುವಿಗಾಗಿ ಪ್ರಯತ್ನಿಸುತ್ತಿದ್ದಾರೆ. ಅರಕಲಗೂಡು ಶಾಸಕ ಎ.ಮಂಜು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ನೀಡಲು ತಯಾರಾಗಿದ್ದಾರೆ. ಬಿಜೆಪಿ ಇನ್ನೂ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.