ಗುರುವಾರ , ಅಕ್ಟೋಬರ್ 17, 2019
21 °C

ಅಧಿಕಾರಕ್ಕಾಗಿ ವಾಮಮಾರ್ಗ ಹಿಡಿಯುವುದಿಲ್ಲ

Published:
Updated:
ಅಧಿಕಾರಕ್ಕಾಗಿ ವಾಮಮಾರ್ಗ ಹಿಡಿಯುವುದಿಲ್ಲ

ಮಂಡ್ಯ: ರಾಜ್ಯ ಸರ್ಕಾರದಲ್ಲಿ ಅನಿಶ್ಚಿತತೆ ಉಂಟಾದರೂ ಕಾಂಗ್ರೆಸ್ ಪಕ್ಷವು ವಾಮಮಾರ್ಗದ ಮೂಲಕ ಅಧಿಕಾರವನ್ನು ಹಿಡಿಯಲು ಬಯಸುವುದಿಲ್ಲ ಎಂದು ಕೇಂದ್ರ ಸಚಿವ ವೀರಪ್ಪ ಮೊಯಿಲಿ ಅವರು ಅಭಿಪ್ರಾಯಪಟ್ಟರು.ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಅಸ್ಥಿರತೆ ಉಂಟಾದರೂ ಯಾವುದೇ ಪಕ್ಷದ ಜೊತೆಗೆ ಕೈಜೋಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.ವಾಮಮಾರ್ಗದಲ್ಲಿ ಅಧಿಕಾರ ಹಿಡಿಯುವ ಅಗತ್ಯ ಕಾಂಗ್ರೆಸ್‌ಗೆ ಇಲ್ಲ. ಮುಂದಿನ ಚುನಾವಣೆಯಲ್ಲೂ ಪಕ್ಷ ಏಕಾಂಗಿಯಾಗಿ ಹೋರಾಟ ನಡೆಸಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸುದ್ದಿಗೋಷ್ಠಿಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಮುನಿಯಪ್ಪ ಇದ್ದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಆತ್ಮಾನಂದ ಅವರು, ಇದೇ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯ ಕಾರ್ಖಾನೆಗಳ ಪ್ರಗತಿ, ಜಿಲ್ಲೆಯಲ್ಲಿನ ರೈಲ್ವೆ ಯೋಜನೆಗಳ ಕಾಮಗಾರಿಗಳ ತ್ವರಿತ ಅನುಷ್ಠಾನ ಕುರಿತು ಮನವಿ ಸಲ್ಲಿಸಿದರು.ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಕೇಂದ್ರದ ಮೂಲಕ ಅಗತ್ಯ ನೆರವು ಕಲ್ಪಿಸವ ಮೂಲಕ ಪುನಃಶ್ಚೇತನಕ್ಕೆ ನೆರವು ನೀಡಬೇಕು. ಅಲ್ಲದೆ, ಬೆಂಗಳೂರು ಮತ್ತು ಮೈಸೂರು ನಡುಣ ರೈಲ್ವೆ ಜೋಡಿ ಮಾರ್ಗ ತ್ವರಿತವಾಗಿ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು.ಅಲ್ಲದೆ, ನಗರದಲ್ಲಿ ರೈಲು ಮಾರ್ಗದ ಬಳಿ ಸಂಚಾರಕೆಕ ಅನುವಾಗುವಂತೆ ಸ್ವರ್ಣಸಂದ್ರ, ಮಾರುಕಟ್ಟೆಯ ಬಳಿ ರೈಲ್ವೆ ಮೇಲುಸೇತುವೆ ನಿರ್ಮಾಣ ಮಾಡುವ ಮೂಲಕ ನಾಗರಿಕರಿಗೆ ನೆರವಾಗಬೇಕು ಎಂದು ಕೋರಿದರು.

 

Post Comments (+)